ದೊಡ್ಡಬಳ್ಳಾಪುರದ ರಾಜಘಟ್ಟದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಶಾಸಕ ಧೀರಜ್​ ಮುನಿರಾಜು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಿದರು. ಶಿವಕುಮಾರ್​, ಜೆಡಿಎಸ್​ ಮುಖಂಡ ಬಿ.ಮುನೇಗೌಡ, ಪಿಎಲ್ಡಿ ಬ್ಯಾಂಕ್​ ಅಧ್ಯಕ್ಷ ಶಿವಕುಮಾರ್​, ರಾಜಘಟ್ಟ ವಿಎಸ್​ಎಸ್​ಎನ್​ ಅಧ್ಯಕ್ಷ ಮುನಿಹನುಮಯ್ಯಇದ್ದರು.  
ರಾಜ್ಯ

ವಿದ್ಯಾರ್ಥಿಗಳು ಜೀವನದ ಪಾಠ ಕಲಿಯಲಿ / DODABALLAPUR

ದೊಡ್ಡಬಳ್ಳಾಪುರ : ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿ ಹೆಚ್ಚಿಸುತ್ತವೆ. ಇತರ ವಿದ್ಯಾರ್ಥಿಗಳಿಗೂ ಸಾಧನೆ ಪ್ರೇರಣೆಯಾಗುತ್ತದೆ ಎಂದು ಶಾಸಕ ಧೀರಜ್​ ಮುನಿರಾಜು ಹೇಳಿದರು.
ತಾಲೂಕಿನ 2025&26ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಶೇ.80ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ರಾಜಘಟ್ಟದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರದಲ್ಲಿ ಮಾತನಾಡಿದರು. ಐದು ವರ್ಷಗಳಿಂದ ಸಾಮಾಜಿಕ ಕಾರ್ಯಕ್ರಮ ಆಯೋಜಿಸುತ್ತಿರುವುದು ಮಾದರಿಯಾಗಿದೆ. ವಿದ್ಯಾರ್ಥಿಗಳು ಪಠ್ಯಕ್ಕೆ ಸೀಮಿತವಾಗದೆ ಜೀವನದ ಪಾಠ ಕಲಿಯಬೇಕಿದೆ ಎಂದರು.
ಕರವೇ ಮುಖಂಡ ರಾಜಘಟ್ಟ ರವಿ ಮಾತನಾಡಿ, ಪ್ರಸ್ತುತ ಹಣ ಸಂಪಾದನೆಯನ್ನೆ ಮಾನದಂಡವಾಗಿ ನೋಡಿ ಮಾನವೀಯ ಮೌಲ್ಯಗಳಿಗೆ ಬೆಲೆ ಇಲ್ಲದಂತಾಗಿದೆ. ಮಕ್ಕಳಲ್ಲಿರುವ ಪ್ರತಿಭೆಯನ್ನು ಪಾಲಕರು ಹಾಗೂ ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸಬೇಕು. ಆಗ ಇನ್ನಷ್ಟು ಸಾಧನೆಗೆ ಸಹಕಾರಿಯಾಗಲಿದೆ ಎಂದರು.
ಜೆಡಿಎಸ್​ ಮುಖಂಡ ಶಿವಕುಮಾರ್​ ಮಾತನಾಡಿ, ರಾಜಘಟ್ಟ ಗ್ರಾಪಂ ವ್ಯಾಪ್ತಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳಲ್ಲಿ ದೈರ್ಯ ತುಂಬುವ ನಿಟ್ಟಿನಲ್ಲಿ ಪುರಸ್ಕಾರ ನೀಡಲಾಗುತ್ತಿದೆ ಎಂದರು. 150ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿತ್ತು. ತಾಪಂ ಮಾಜಿ ಸದಸ್ಯ ಕೋಡಿ ನರಸಿಂಹಮೂರ್ತಿ, ವೆಂಕಟರಮಣಪ್ಪ, ಜಿಲ್ಲಾ ಕಲಾವಿದರ ಸಂಘದ ಅಧ್ಯಕ್ಷ ಕೆಂಪಣ್ಣ ಇತರರು ಇದ್ದರು.