Press meet 
ರಾಜ್ಯ

13ನೇ ಕೆಎಸ್‌ಆರ್‌ಪಿ ಬೆಟಾಲಿಯನ್ ಸ್ಥಾಪನೆಯಾಗಲಿ

ರಾಯಚೂರು

ರಾಜ್ಯದ ಬಜೆಟ್‌ನಲ್ಲಿ ಜಿಲ್ಲೆಗೆ 13 ನೇ ಕೆಎಸ್‌ಆರ್‌ಪಿ ಬೆಟಾಲಿಂದದ ಸ್ಥಾಪನೆಗೆ ಅನುಮತಿ ನೀಡಬೇಕೆಂದು ಅಖಿಲಾಂಡ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಮಿತಿಯ ಅಧ್ಯಕ್ಷ ವೆಂಕಟೇಶ ನಾಯಕ ಅಸ್ಕಿಹಾಳ ಒತ್ತಾಯಿಸಿದರು.

ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆಂಧ್ರ ಮತ್ತು ತೆಲಂಗಾಣದ ಗಡಿ ಪ್ರದೇಶದ ಜಿಲ್ಲೆಯಲ್ಲಿ ಕೆಎಸ್‌ಆರ್‌ಪಿ ತಡೆ ಸ್ಥಾಪಿಸುವ ಅಗತ್ಯವಿದೆ.

ಕಾನೂನು ಸುವ್ಯವಸ್ಥೆಗೆ ಸಹಾರಿಯಾಗಲಿರುವ ಕೆಎಸ್‌ಆರ್‌ಪಿ ಪಡೆಯಿಂದ ಭದ್ರತಾ ವ್ಯವಸ್ಥೆ ಹೆಚ್ಚಿಸಲು ಸಹಕಾರಿಯಾಗಲಿದೆ. ಹಟ್ಟಿ ಚಿನ್ನದ ಗಣಿ, ಆರ್‌ಟಿಪಿಎಸ್, ವೈಟಿಪಿಎಸ್ ಸೇರಿದಂತೆ ವಿದ್ಯುತ್ ಉತ್ಪಾದನಾ ಘಟಕಗಳು ಇದ್ದು ರಾಜಕೀಯವಾಗಿ ಭದ್ರತಾ ವ್ಯವಸ್ಥೆಗೆ ಕೆಎಸ್‌ಆರ್‌ಪಿ ಪಡೆ ಕಾರ್ಯನಿರ್ವಹಣೆ ಅವಶ್ಯಕತೆಯಿದ್ದು, ಬಜೆಟ್‌ನಲ್ಲಿ ಘೋಷಣೆ ಮಾಡಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ರಾಘವೇಂದ್ರ ನಾಯಕ, ಜನಾರ್ಧನ, ನರಸಿಂಹಲು, ಹೊನ್ನಪ್ಪ,ಕಾಶಿನಾಥ, ನಾಗರಾಜ, ಈರೇಶ, ವೆಂಕಟೇಶ ಇದ್ದರು.