ಶಾಸಕ ಸಿಮೆಂಟ್ ಮಂಜು ನಿವಾಸಕ್ಕೆ ಅಧಿಕಾರಿಗಳು ಭೇಟಿ ನೀಡಿ ಅಗತ್ಯ ಮಾಹಿತಿ ಪಡೆದರು.
- ಶಾಸಕ ಸಿಮೆಂಟ್ ಮಂಜು
- ಮತದಾರರ ಪಟ್ಟಿ ಪರಿಷ್ಕರಣೆ
ಸಕಲೇಶಪುರ: ಸಮಗ್ರ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಮತದಾರರು ಹೆಚ್ಚಿನ ಜಾಗ್ರತೆ ವಹಿಸುವುದು ಅಗತ್ಯ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.
ಮತದಾರರ ಪಟ್ಟಿ ಪರಿಷ್ಕರಣೆಗೆಂದು ಮಂಗಳವಾರ ಆಗಮಿಸಿದ್ದ ಅಧಿಕಾರಿಗಳಿಗೆ ಮಾಹಿತಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ಕ್ಷೇತ್ರದ 285 ಬಿಎಲ್‌ಎ 2 ಸಿಬ್ಬಂದಿಗೆ ನಾಲ್ಕು ಬಾರಿ ತರಬೇತಿ ನೀಡಲಾಗಿರುವುದರಿಂದ ಕಾರ್ಯದಲ್ಲಿ ಯಾವುದೇ ಗೊಂದಲ ಇಲ್ಲ. ಆದರೆ, ಮತದಾರರ ಸಹಕಾರ ಅಗತ್ಯ ಎಂದರು.
ಪರಿಷ್ಕರಣೆಯಲ್ಲಿ ಪಾಲ್ಗೊಳ್ಳುವುದು ಹಾಗೂ ಸಹಕರಿಸುವುದು ಎಲ್ಲರ ಕರ್ತವ್ಯ. ಮುಂದಿನ ದಿನಗಳಲ್ಲಿ ಸರ್ಕಾರದ ಯಾವುದೇ ಯೋಜನೆಯ ಫಲ ಪಡೆಯಬೇಕಾದರೆ ಮತದಾರರ ಗುರುತಿನ ಚೀಟಿಯೇ ಪ್ರಮುಖ ಆಧಾರವಾಗಲಿದೆ. ಆದ್ದರಿಂದ ಮತಪಟ್ಟಿಯಿಂದ ಅರ್ಹರು ಹೊರಗುಳಿಯದಂತೆ ನೋಡಿಕೊಳ್ಳಬೇಕಿದೆ ಎಂದರು.