ವಿರಾಜಪೇಟೆಯಲ್ಲಿ ಆಯೋಜಿಸಿದ್ದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿದರು. ಬಿಂದು ಮಣಿ, ಪ್ರವೀಣ್ ಇದ್ದರು. 
ರಾಜ್ಯ

ಗಣೇಶೋತ್ಸವ ಸಮಿತಿಗಳು ಜವಾಬ್ದಾರಿ ಅರಿಯಲಿ

ಪ್ರಮುಖ ಮುಖ್ಯಾಂಶಗಳು

  • ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ
  • ವಿರಾಜಪೇಟೆಯಲ್ಲಿ ನಡೆಯುವ ಪ್ರಸಿದ್ಧ ಗಣೇಶೋತ್ಸವದ ಹಿನ್ನೆಲೆ
ವಿರಾಜಪೇಟೆ: ಪ್ರತಿ ವರ್ಷದಂತೆ ಈ ವರ್ಷವೂ ಗಣೇಶೋತ್ಸವವನ್ನು ವಿಜೃಂಭಣೆಯಿಂದ ಆಚರಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಹೇಳಿದರು.
ವಿರಾಜಪೇಟೆಯಲ್ಲಿ ನಡೆಯುವ ಪ್ರಸಿದ್ಧ ಗಣೇಶೋತ್ಸವದ ಹಿನ್ನೆಲೆಯಲ್ಲಿ ಶಾಸಕರ ಗೃಹ ಕಚೇರಿಯಲ್ಲಿ ಆಯೋಜಿಸಿದ್ದ ಗಣೇಶೋತ್ಸವ ಸಮಿತಿಯ ಪ್ರಮುಖರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಸಕಲ ವ್ಯವಸ್ಥೆಗಳನ್ನು ಸಾರ್ವಜನಿಕರಿಗೆ ಕಲ್ಪಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಹೇಳಿದರು.
ಗಣೇಶೋತ್ಸವ ಸಮಿತಿಯ ಅಹವಾಲು ಹಾಗೂ ಬೇಡಿಕೆಗಳನ್ನು ಆಲಿಸಿದ ಶಾಸಕರು, ಹಲವು ಸಲಹೆ-ಸೂಚನೆಗಳನ್ನು ನೀಡಿದರಲ್ಲದೆ, ಪ್ರತಿ ಸಮಿತಿ ಅತ್ಯಂತ ಜವಾಬ್ದಾರಿ ಹಾಗೂ ಕಾಳಜಿಯಿಂದ ಕಾರ್ಯಕ್ರಮವನ್ನು ಸಂಪನ್ನಗೊಳಿಸಬೇಕು. ಇದಕ್ಕೆ ಬೇಕಾದ ಎಲ್ಲ ಕಾರ್ಯ ತಂತ್ರಗಳನ್ನು ಅನುಸರಿಸಬೇಕು. ಧ್ವನಿವರ್ಧಕ ವಿಷಯದಲ್ಲಿ ಸರ್ಕಾರದ ಆದೇಶವನ್ನು ಪಾಲನೆ ಮಾಡಬೇಕು ಎಂದು ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದು ಮಣಿ ಮಾತನಾಡಿ, ಸರ್ಕಾರದ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದ್ದರು.
ಸಭೆಯಲ್ಲಿ ವಿರಾಜಪೇಟೆ ತಹಸೀಲ್ದಾರ್ ಪ್ರವೀಣ್, ನಗರ ಕಾಂಗ್ರೆಸ್ ಅಧ್ಯಕ್ಷ ಮಾಳೇಟೀರ ಬೋಪಣ್ಣ, ಮಾಜಿ ಅಧ್ಯಕ್ಷ ಮಾದಂಡ ತಿಮ್ಮಯ್ಯ, ವಕೀಲ ನರೇಂದ್ರ ಕಾಮತ್ ಇತರರಿದ್ದರು.