ಸ್ಥಳಿಯರೇ ರಸ್ತೆಯ ಗುಣಮಟ್ಟ ಪರಿಶೀಲಿಸಲಿ road
ಟೇಕಲ್: ಮಾಲೂರು ತಾಲೂಕಿನಲ್ಲಿ 6 ತಿಂಗಳೊಳಗೆ ಎಲ್ಲ ಗ್ರಾಮೀಣ ರಸ್ತೆಗಳು ಗುಣಮಟ್ಟದ ರಸ್ತೆಗಳಾಗಿ ಮಾರ್ಪಾಡಾಗಲಿವೆ. ಸುಮಾರು <1 ಕೋಟಿ ವೆಚ್ಚದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಸಿಸಿ ರಸ್ತೆ ಮಾಡಲಾಗುತ್ತಿದೆ ಎಂದು ಶಾಸಕ ಕೆ.ವೈ.ನಂಜೇಗೌಡ ತಿಳಿಸಿದರು.road
ಟೇಕಲ್ನ ಕೊಂಡಶೆಟ್ಟಹಳ್ಳಿ ಗ್ರಾಪಂ ವ್ಯಾಪ್ತಿಯ ಅಗರ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ 1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ತಾಲೂಕಿಗೆ ಗ್ರಾಮೀಣಾಭಿವೃದ್ಧಿಗೆ 38 ಕೋಟಿಗೂ ಹೆಚ್ಚು ಹಣ ಬಿಡುಗಡೆ ಮಾಡಿಸಿದ್ದು, ತಾಲೂಕಿನ ಗ್ರಾಮೀಣ ರಸ್ತೆಗಳ ಸಂಪರ್ಕಗಳನ್ನು ಸಿಸಿ ರಸ್ತೆಗಳನ್ನಾಗಿ ಮಾಡುವುದು ನಮ್ಮ ಕರ್ತವ್ಯವಾಗಿದ್ದು, ಲೋಕೋಪಯೋಗಿ ಇಲಾಖೆಯಿಂದ ರಸ್ತೆ ಕಾಮಗಾರಿ ನಡೆಯುತ್ತಿದೆ. ಗುತ್ತಿಗೆದಾರರು, ಇಂಜಿನಿಯರ್ಗಳು ಗುಣಮಟ್ಟದ ರಸ್ತೆ ಮಾಡುತ್ತಿದ್ದಾರೆ ಎಂಬುದನ್ನು ಸ್ಥಳಿಯರೇ ಗಮನಿಸಬೇಕು ಎಂದರು. ಕೊಂಡಶೆಟ್ಟಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಪ್ರಕಾಶ್