Let the poor not be deprived of education.
ಬೇತಮಂಗಲ: ಶಿಕ್ಷಣದಿಂದ ಯಾವುದೇ ವಿದ್ಯಾರ್ಥಿ ವಂಚಿತವಾಗಬಾರದು ಎಂಬ ಉದ್ದೇಶದಿಂದ ಆರ್.ಕೆ.ಫೌಂಡೇಶನ್ನಿಂದ ಸತತ 9ನೇ ವರ್ಷವೂ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಮಾಡಲಾಗುತ್ತಿದೆ ಎಂದು ೌಂಡೇಶನ್ ಅಧ್ಯಕ್ಷ ಮೋಹನ್ ಕೃಷ್ಣ ತಿಳಿಸಿದರು.
ಸುಂದರಪಾಳ್ಯದ ಕರ್ನಾಟಕ ಪಬ್ಲಿಕ್ ಶಾಲೆ, ಗ್ರೀನ್ ವುಡ್ಸ್ ಇಂಟರ್ನ್ಯಾಷನಲ್ ಶಾಲೆ, ಶ್ರೀ ವೆಂಕಟೇಶ್ವರ ಇಂಟರ್ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಿಸಿ ಮಾತನಾಡಿ, ಕಳೆದ 9 ವರ್ಷದಿಂದ ಕ್ಷೇತ್ರದಲ್ಲಿ ವಿವಿಧ ಸಮಾಜಮುಖಿ ಸೇವಾ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದ್ದೇನೆ.
ಯಾವುದೇ ರಾಜಕೀಯ ಉದ್ದೇಶದಿಂದ ಸೇವೆ ಮಾಡುತ್ತಿಲ್ಲ. ಬದಲಾಗಿ ಆರ್ಥಿಕವಾಗಿ ಹಿಂದುಳಿದ ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಸಾವಿರಾರು ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಿಸಲಾಗುತ್ತಿದೆ. ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಬುನಾದಿಯಾಗಿದ್ದು, ವಿದ್ಯಾರ್ಥಿಗಳು ಸೌಲಭ್ಯಗಳನ್ನು ಸದುಪಯೋಗಿಸಿಕೊಂಡು ವಿದ್ಯಾಭ್ಯಾಸ ಮಾಡಬೇಕು ಎಂದರು.
ಮುಖಂಡರಾದ ಸುಧಾಕರ್ ರೆಡ್ಡಿ, ಶ್ರೀನಿವಾಸ್ ರೆಡ್ಡಿ, ಚನ್ನಾಮೂರ್ತಿ, ಬಾಬುರೆಡ್ಡಿ, ಪೆದ್ದಣ್ಣ ಇದ್ದರು