ಗೊಳಸಂಗಿಯ ಶ್ರೀ ಚ.ಚ.ಹೆಬ್ಬಾಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿವಿಧ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳ ಸಮಾರೋಪ ಪದವಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಕುರಿತು ಸಾಹಿತಿ ಡಾ.ಸಂಗಮನಾಥ ಲೋಕಾಪುರ ಮಾತನಾಡಿದರು. ಪ್ರಾಚಾರ್ಯ ಪ್ರೊ. ಎಸ್.ಆರ್.ಕುಂಬಾರ, ಪಿಡಿಒ ಎಂ.ಎಚ್.ಕಾಳಗಿ ಮತ್ತಿತರರಿದ್ದರು. 
ರಾಜ್ಯ

ವಿದ್ಯಾರ್ಥಿಗಳು ಅವಕಾಶ ಬಳಸಿಕೊಳ್ಳಲಿ

ಪ್ರಮುಖ ಮುಖ್ಯಾಂಶಗಳು

  • ಸಾಹಿತಿ ಡಾ. ಸಂಗಮನಾಥ ಲೋಕಾಪುರ ಹೇಳಿಕೆ
  • ಪದವಿ ವಿದ್ಯಾರ್ಥಿಗಳ ಬೀಳ್ಕೊಡುಗೆ
ಗೊಳಸಂಗಿ: ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಕಾಲಹರಣ ಮಾಡಬೇಡಿ, ಸೌಲಭ್ಯಗಳಿಲ್ಲದ ದಿನಗಳಲ್ಲಿ ಕಲಿತು, ವಿಶ್ವವಿದ್ಯಾಲಯದ ಪ್ರಾಧ್ಯಾಪಕನಾಗಿ, ಸಾಹಿತಿಯಾಗಿ ನೂರಾರು ಮಕ್ಕಳಿಗೆ ದಾರಿದೀಪ ನಾನಾಗಿರುವೆ. ವಿದ್ಯಾರ್ಥಿಗಳು ಪದವಿಯಲ್ಲಿ ಸಿಕ್ಕ ಅವಕಾಶ ಬಳಸಿಕೊಂಡು ಜೀವನ ರೂಪಿಸಿಕೊಳ್ಳಿ ಎಂದು ವಿಶ್ರಾಂತ ಪ್ರಾಧ್ಯಾಪಕ ಡಾ. ಸಂಗಮನಾಥ ಲೋಕಾಪುರ ಆಶಯ ವ್ಯಕ್ತ ಪಡಿಸಿದರು.
ಚ.ಚ.ಹೆಬ್ಬಾಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಜರುಗಿದ 2025-26ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ಎನ್‌ಎಸ್‌ಎಸ್, ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ಕಾರ್ಯ ಚಟುವಟಿಕೆಗಳ ಸಮಾರೋಪ ಮತ್ತು ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.
ಮಕ್ಕಳು ಬದುಕಿನಲ್ಲಿ ದಾರಿ ತಪ್ಪದಂತೆ ಕಾಪಾಡುವುದು ಹೆತ್ತವರ ಜವಾಬ್ದಾರಿಯಾದರೆ, ಹೆತ್ತವರು ಎಂದಿಗೂ ತಲೆ ತಗ್ಗಿಸದಂತೆ ಕಾಯುವುದು ಮಕ್ಕಳ ಕರ್ತವ್ಯವಾಗಿದೆ ಎಂದರು.
ಪ್ರಾಚಾರ್ಯ ಪ್ರೊ.ಎಸ್.ಆರ್.ಕುಂಬಾರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಿಡಿಒ ಎಂ.ಎಚ್.ಕಾಳಗಿ, ಅಶೋಕ ಗುಡದಿನ್ನಿ, ಪ್ರಕಾಶ ದಶವಂತ, ರಾಘವೇಂದ್ರ ಕಾಳಗಿ, ಕುಮಾರಗೌಡ ಪಾಟೀಲ, ಅಮೃತ ಯಾದವ ಮತ್ತಿತರರು ಇದ್ದರು. ವಿವಿಧ ಸಾಂಸ್ಕೃತಿಕ, ಕ್ರೀಡೆ, ಎನ್‌ಎಸ್‌ಎಸ್, ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ಕಾರ್ಯ ಚಟುವಟಿಕೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.