ಕೆ.ಆರ್.ನಗರದಲ್ಲಿ ಆಯೋಜಿಸಿದ್ದ ಸಮಾರಂಭವನ್ನು ಶಾಸಕ ಡಿ.ರವಿಶಂಕರ್ ಉದ್ಘಾಟಿಸಿದರು. ಕೆ.ದೀಪಕ್, ಧರ್ಮಪುರ ನಾರಾಯಣ್, ಕೆ.ಎನ್.ಬಸಂತ್, ಪಂಡಿತ್ ನಾಟಿಕರ್ ಇತರರು ಇದ್ದರು.  
ರಾಜ್ಯ

ತಂತ್ರಜ್ಞಾನಕ್ಕೆ ತಕ್ಕಂತೆ ಪತ್ರಕರ್ತರ ಕಾರ್ಯವೈಖರಿ ಬದಲಾಗಲಿ

ಪ್ರಮುಖ ಮುಖ್ಯಾಂಶಗಳು

  • ಶಾಸಕ ಡಿ.ರವಿಶಂಕರ್
  • ಪಿಎಲ್‌ಡಿನ ಬ್ಯಾಂಕ್ ರೈತ ಸಮುದಾಯ ಭವನ

ಕೆ.ಆರ್.ನಗರ:

ಇಂದಿನ ದಿನಮಾನಗಳಲ್ಲಿ ಪತ್ರಕರ್ತರು ತಂತ್ರಜ್ಞಾನಕ್ಕೆ ತಕ್ಕಂತೆ ಕಾರ್ಯವೈಖರಿಯಲ್ಲಿ ಬದಲಾವಣೆ ಕಂಡುಕೊಳ್ಳಬೇಕು ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.

ಪಟ್ಟಣದ ಪಿಎಲ್‌ಡಿನ ಬ್ಯಾಂಕ್ ರೈತ ಸಮುದಾಯ ಭವನದಲ್ಲಿ ಕೃಷ್ಣರಾಜನಗರ ತಾಲೂಕು ಕಾರ್ಯಾನಿರತ ಪತ್ರಕರ್ತರ ಸಂಘದಿಂದ ಶುಕ್ರವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಇಂದಿನ ಯುವ ಪೀಳಿಗೆ ಸಾಮಾಜಿಕ ಜಾಲತಾಣಗಳ ಕಡೆ ಹೆಚ್ಚು ವಾಲಿದ್ದು, 50 ವರ್ಷ ಮೇಲ್ಪಟ್ಟವರು ಮಾತ್ರ ಹೆಚ್ಚಾಗಿ ಪತ್ರಿಕೆಗಳನ್ನು ಓದುತ್ತಿದ್ದಾರೆ. ಈ ಪರಿಸ್ಥಿತಿ ಬದಲಾಗಬೇಕು ಎಂದರು.
ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಧೀಪಕ್, ಪ್ರಧಾನ ಕಾರ್ಯದರ್ಶಿ ಧರ್ಮಪುರ ನಾರಾಯಣ್, ನವ ನಗರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ಬಸಂತ್, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಪಂಡಿತ್ ನಾಟಿಕರ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಕಸಾಪ ತಾಲ್ಲೂಕು ಅಧ್ಯಕ್ಷ ಡಿಂಡಿಮ ಶಂಕರ್, ರಾಷ್ಟ್ರೀಯ ಅಹಿಂದ ಸಂಘಟನೆ ರಾಜ್ಯ ಉಪಾಧ್ಯಕ್ಷ ಗರುಡುಗಂಭ ಮಂಜುನಾಥ್, ತಾಲೂಕು ಅಧ್ಯಕ್ಷ ಕೆಸ್ತೂರು ಮಧು, ತಾಲೂಕು ಕುರುಬರ ಸಂಘದ ಅಧ್ಯಕ್ಷ ಜೆ.ಶಿವಣ್ಣ, ಕಾಯಕ ಸಮಾಜದ ತಾಲೂಕು ಅಧ್ಯಕ್ಷ ತಿಮ್ಮಶೆಟ್ಟಿ, ಪುರಸಭಾ ಮಾಜಿ ಅಧ್ಯಕ್ಷ ಕೋಳಿಪ್ರಕಾಶ್, ತಾಪಂ ಮಾಜಿ ಅಧ್ಯಕ್ಷ ಹಾಡ್ಯ ಮಹದೇವಸ್ವಾಮಿ ಜೆಡಿಎಸ್ ವಕ್ತಾರ ಕೆ.ಎಲ್.ರಮೇಶ್, ಜಿಲ್ಲಾ ಪತ್ರಕರ್ತರ ಸಂಘದ ನಿರ್ದೇಶಕರಾದ ಸೋಮಶೇಖರ್, ರೋಜಾಮಹೇಶ್, ಕವಿತಾ, ತಾಲೂಕು ಸಂಘದ ಪ್ರಧಾನ ಕಾರ್ಯದರ್ಶಿ ನಾಗೇಶ್, ಉಪಾಧ್ಯಕ್ಷ ಸಿ.ಜಿ.ಮಧುಸೂಧನ್ ಇತರರು ಹಾಜರಿದ್ದರು.