ಹನೂರು ತಾಲೂಕು ರಾಮಾಪುರದಲ್ಲಿ ಆಯೋಜಿಸಿದ್ದ ವಾಲಿಬಾಲ್ ಪಂದ್ಯಾವಳಿಗೆ ಶಾಸಕ ಎಂ.ಆರ್ ಮಂಜುನಾಥ್ ಚಾಲನೆ ನೀಡಿದರು. ಮುನೇಶ್, ಕೃಷ್ಣಮೂರ್ತಿ, ವಿಜಯಕುಮಾರ್ ಇತರರಿದ್ದರು.
ಹನೂರು: ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಭಾಗವಹಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಇದರಿಂದ ಆರೋಗ್ಯದಲ್ಲಿ ಸುಸ್ಥಿತಿ ಕಾಪಾಡಿಕೊಳ್ಳಬಹುದು ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು.
ತಾಲೂಕಿನ ರಾಮಾಪುರದ ಬೈಯಮ್ಮ ತಾಯಿ ದೇಗುಲ ಹಾಗೂ ಆಂಜನೇಯಸ್ವಾಮಿ ಸೇವಾ ಟ್ರಸ್ಟ್ ವತಿಯಿಂದ ಶನಿವಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಆಯೋಜಿಸಿದ್ದ ವಾಲಿಬಾಲ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು.
ತಾಲೂಕಿನಲ್ಲಿ ಯುವಕರು ಸೇರಿದಂತೆ ಶಾಲಾ, ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕ್ರೀಡೆಯ ಬಗ್ಗೆ ಹೆಚ್ಚಿನ ಆಸಕ್ತಿಯಿದ್ದು, ರಾಜ್ಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವುದು ಹೆಮ್ಮೆಯ ವಿಷಯ. ಆದ್ದರಿಂದ ಪ್ರತಿಯೊಬ್ಬರೂ ಕ್ರೀಡೆಯ ಬಗ್ಗೆ ಒಲವು ಬೆಳೆಸಿಕೊಳ್ಳಬೇಕು. ಹನೂರಿನ ಶ್ರೀ ಮಹದೇಶ್ವರ ಕ್ರೀಡಾಂಗಣವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಕ್ರಿಯಾಯೋಜನೆ ತಯಾರಿಸಿ ಅನುದಾನಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಈ ಕಾರ್ಯ ಅನುಷ್ಠಾನಕ್ಕೆ ಬರಲಿದೆ. ಇದರಿಂದ ಕ್ರೀಡಾಪಟುಗಳಿಗೆ ಅನುಕೂಲವಾಗಲಿದೆ ಎಂದರು.
ಮುಖಂಡರಾದ ಮುನೇಶ್, ಕೃಷ್ಣಮೂರ್ತಿ, ಕುಮಾರ್, ವಿಜಯಕುಮಾರ್, ವಿಶ್ವ, ಶಿವ, ರಾಜೇಂದ್ರ, ಮೂರ್ತಿ, ಚಿನ್ನವೆಂಕಟ, ಗೋವಿಂದ, ನಟರಾಜು ಇತರರು ಇದ್ದರು.