ಬೆಟ್ಟದಪುರ ಸಮೀಪದ ಚಪ್ಪರದಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಆಯೋಜಿಸಿದ್ದ ವಿಶೇಷ ಸಭೆಯನ್ನು ಗಣ್ಯರು ಉದ್ಘಾಟಿಸಿದರು. ರಾಜಾಭೋವಿ, ಕೆ.ಕೆ.ಶ್ರೀದೇವಿ, ಜಯಲಕ್ಷ್ಮಿ, ರಮಣಯ್ಯ, ಮಹೇಂದ್ರ ಇತರರು ಇದ್ದರು.
- ಚಪ್ಪರದಹಳ್ಳಿ ಗ್ರಾಮ ಪಂಚಾಯಿತಿ
- ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆ
ಬೆಟ್ಟದಪುರ: ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಸಮೀಪದ ಚಪ್ಪರದಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಶುಕ್ರವಾರ ವಿಶೇಷ ಸಭೆ ಕರೆಯಲಾಗಿತ್ತು.
ಗ್ಯಾರಂಟಿ ಯೋಜನೆಗಳ ಸದಸ್ಯ ಸಿ.ಜೆ.ರವಿ ಮಾತನಾಡಿ, ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳು ಸಮರ್ಪಕವಾಗಿ ಪಡೆದುಕೊಳ್ಳುವಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯನಿರ್ವಹಿಸಬೇಕು. ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಯಾವುದೇ ಫಲಾನುಭವಿ ಸೌಲಭ್ಯದಿಂದ ವಂಚಿತರಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ಮಾಜಿ ಸದಸ್ಯ ರಾಜಾಭೋವಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆ.ಕೆ. ಶ್ರೀದೇವಿ, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಜಯಲಕ್ಷ್ಮಿ, ಬಿಲ್ ಕಲೆಕ್ಟರ್ ರಮಣಯ್ಯ, ಕ್ಲರ್ಕ್ ಮಹೇಂದ್ರ ಇತರರು ಇದ್ದರು.