ಮದ್ದೂರು ನಗರಸಭೆ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್‌ರ ಪುತ್ಥಳಿಗೆ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ವೇದಿಕೆ ವತಿಯಿಂದ ಮಾಲಾರ್ಪಣೆ ಮಾಡಲಾಯಿತು. ಎಂ.ಕೃಷ್ಣ, ಎಲ್.ಸಂದೇಶ್, ಕೆ.ಟಿ.ಶಿವಕುಮಾರ್, ಪಿ.ಶಶಿಕುಮಾರ್, ಡಿ.ಸಿ.ಮಹೇಂದ್ರ ಇತರರಿದ್ದರು.
- ಡಿ.ದೇವರಾಜ ಅರಸು ಅವರ ಜನ್ಮ ದಿನ
- ಕುಂಬಾರ ಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಎಂ.ಕೃಷ್ಣ
ಮದ್ದೂರು: ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ವೇದಿಕೆ ವತಿಯಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್‌ಭವನದಲ್ಲಿ ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ನೇತಾರ ಡಿ.ದೇವರಾಜ ಅರಸು ಅವರ ಜನ್ಮ ದಿನವನ್ನು ಆಚರಿಸಲಾಯಿತು.
ಕುಂಬಾರ ಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಎಂ.ಕೃಷ್ಣ ಮಾತನಾಡಿ, ಪ್ರಸ್ತುತ ಶೇ.3ರಷ್ಟು ಮೇಲ್ವರ್ಗದ ಜನರು ಮೀಸಲಾತಿ ವಿಚಾರ ಬಗ್ಗೆ ಮಾತನಾಡುವುದರ ಜತೆಗೆ ಯುವ ಸಮೂಹವನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ. ದಲಿತ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ವರ್ಗದವರು ಮೀಸಲಾತಿ ಪಡೆಯುತ್ತಿರುವ ಕುರಿತು ಮಾತನಾಡುವರು ಮೊದಲು ಆತ್ಮವಿಮರ್ಶೆ ಮಾಡಿಕೊಳ್ಳಲಿ ಎಂದರು.
ಶೋಷಿತ ವರ್ಗಗಳಾದ ನಾವು ಶೇ.97ರಷ್ಟಿದ್ದು, ನಾವು ಪಡೆಯುತ್ತಿರುವ ಮೀಸಲಾತಿಗೆ ತಡೆ ಒಡ್ಡಿದ್ದಾರೆ. ಹೀಗಾಗಿ ಅದರ ವಿರುದ್ಧ ನಮ್ಮ ಹೋರಾಟ ಅನಿವಾರ್ಯ ಎಂದು ಎಚ್ಚರಿಸಿದರು.
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಜಿಲ್ಲಾಧ್ಯಕ್ಷ ಎಲ್.ಸಂದೇಶ್ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ಎಲ್ಲ ವರ್ಗದ ಹಿಂದುಳಿದ ಶೋಷಿತ ಸಮುದಾಯಗಳಿಗೆ ಮೀಸಲಾತಿ ನೀಡಿದ್ದಾರೆ. ಹಾಗಾಗಿ ಹಿಂದುಳಿದ ವರ್ಗಗಳು ಅಂಬೇಡ್ಕರ್ ಅವರ ವಿಚಾರವನ್ನು ಅರ್ಥೈಸಿಕೊಳ್ಳಬೇಕು ಎಂದು ಹೇಳಿದರು.
ಡಿ.ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಹಿಂದುಳಿದ ವರ್ಗದ 63 ಜನರು ಶಾಸಕರಾಗಿ ಆಯ್ಕೆಯಾಗಿದ್ದರು ಎಂದು ಸ್ಮರಿಸಿದರು.
ಕಾರ್ಯಕ್ರಮಕ್ಕೂ ಮುನ್ನ ನಗರಸಭೆ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್‌ರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆಯ ಮದ್ದೂರು ಸಂಚಾಲಕ ಪಿ.ಶಶಿಕುಮಾರ್, ತಾಲೂಕು ದಲಿತ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಟಿ.ಶಿವಕುಮಾರ್, ವೈಜ್ಞಾನಿಕ ಪರಿಷತ್‌ನ ತಾಲೂಕು ಅಧ್ಯಕ್ಷ ಡಿ.ಸಿ.ಮಹೇಂದ್ರ, ಅಹಿಂದ ಸಂರಕ್ಷಣಾ ವೇದಿಕೆ ಅಧ್ಯಕ್ಷ ಮಲವರಾಜು, ಅಖಿಲ ಕರ್ನಾಟಕ ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷ ತೈಲೂರು ಆನಂದಾಚಾರ್, ದಾಕ್ಷಾಯಿಣಿ ವೆಂಕಟೇಶ್, ಮಂಚಶೆಟ್ಟಿ, ಶಿಕ್ಷಕರಾದ ಕೆ.ಜೆ.ಗೋವಿಂದ ರಾಜ್, ತೂಬಿನಕೆರೆ ರಮೇಶ್, ರಾಚಯ್ಯ, ಜಯರಾಮಯ್ಯ, ಧನಂಜಯ, ಮಹದೇವಯ್ಯ ಇತರರಿದ್ದರು.