ಕನಕಪುರದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಎಂ. ಸಂಜಯ್, ಕೆ.ಎನ್.ದಿಲೀಪ್ ಇದ್ದರು. 
ರಾಜ್ಯ

ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಿಂದ ಆಚರಿಸೋಣ

ಕನಕಪುರ: ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸುವಂತೆ ತಹಸೀಲ್ದಾರ್ ಎಂ. ಸಂಜಯ್ ತಿಳಿಸಿದರು. ಸೋಮವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ತಾಲೂಕು ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿರಬೇಕು.
ನಗರದ ಮುಖ್ಯ ಬೀದಿಯಲ್ಲಿನ ಅಂಗಡಿ ಮಳಿಗೆಗಳ ಮಾಲೀಕರು ಅಂಗಡಿಗಳನ್ನು ವಿದ್ಯುತ್ ದೀಪದಿಂದ ಅಲಂಕರಿಸಲು ಸೂಚಿಸಿದರು. ಶಾಲಾ-ಕಾಲೇಜಿನ ವಿದ್ಯಾರ್ಥಿಗಳಲ್ಲದೆ, ಸಾರ್ವಜನಿಕರು ತಪ್ಪದೆ ಹಾಜರಿದ್ದು, ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಸಹಕಾರಿಯಾಗುವಂತೆ ತಿಳಿಸಿದರು.
ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಕೆ.ಎನ್.ದಿಲೀಪ್, ಸ್ಥಳೀಯ ಸಂಘ ಸಂಸ್ಥೆ ಪದಾಧಿಕಾರಿಗಳು, ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.