Let us strive unitedly for quality education. 
ರಾಜ್ಯ

ಗುಣಮಟ್ಟದ ಶಿಕ್ಷಣಕ್ಕೆ ಒಗ್ಗಟ್ಟಿನಿಂದ ಶ್ರಮಿಸೋಣ

ಮುಳಬಾಗಿಲು:

ಶಿಕ್ಷಕರ ಕುಂದು&ಕೊರತೆಗಳನ್ನು ಆಲಿಸಿ, ಶೀಘ್ರ ಪರಿಹರಿಸುವ ಮೂಲಕ ಶಿಕ್ಷಕರು ಉತ್ತಮ ವಾತಾವರಣದಲ್ಲಿ ಕಾರ್ಯನಿರ್ವಹಿಸಲು ಸಹಕಾರ ನೀಡಲಾಗುವುದು. ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಶಿಕ್ಷಕರು, ಶಿಕ್ಷಣ ಇಲಾಖೆ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸೋಣ ಎಂದು ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಆರ್​.ಶಂಕರೇಗೌಡ ಹೇಳಿದರು.

ಬಿಇಒ ಕಚೇರಿಯ ಮುಂದೆ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಹಮ್ಮಿಕೊಂಡಿದ್ದ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾಲೂಕಿನ ಕಟ್ಟಕಡೆಯ ಶಾಲೆಯಲ್ಲಿನ ಶಿಕ್ಷಕರಿಗೂ ಶಿಕ್ಷಣ ಇಲಾಖೆಯ ಸೌಲಭ್ಯಗಳು ತಲುಪಬೇಕು. ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆ ಗುರುತಿಸಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲಾಗುವುದು. ಪ್ರತಿಯೊಬ್ಬ ವಿದ್ಯಾರ್ಥಿಗೂ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಶಿಕ್ಷಕರು ಕರ್ತವ್ಯ ನಿರ್ವಹಿಸಬೇಕು ಎಂದರು.
ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ವಿ.ಜಗನ್ನಾಥ್​ ಮಾತನಾಡಿ, ಎಸ್ಸಿ, ಎಸ್ಟಿ, ಒಬಿಸಿ ಗಣತಿ ಹಾಗೂ ಜನಗಣತಿ ಕಾರ್ಯದಲ್ಲಿ ಶಿಕ್ಷಕರು ಕರ್ತವ್ಯ ನಿರ್ವಹಿಸಿರುವ ಹಿನ್ನೆಲೆಯಲ್ಲಿ ಲಭ್ಯವಾಗಬೇಕಾದ ಗಳಿಕೆ ರಜೆಯನ್ನು ಸೇವಾ ಪುಸ್ತಕದಲ್ಲಿ ನಮೂದಿಸಲು ಕ್ರಮ ಕೈಗೊಳ್ಳಬೇಕು. ಎಚ್​ಆರ್​ಎಂಎಸ್​ 2.0ಗೆ ಸಂಬಂಧಿಸಿದಂತೆ ಶಿಕ್ಷಕರು ಹಲವು ಸಮಸ್ಯೆ ಎದುರಿಸುತ್ತಿದ್ದು, ತ್ವರಿತವಾಗಿ ಪರಿಹರಿಸಲು ಕ್ರಮವಹಿಸಬೇಕು ಎಂದು ಮನವಿ ಮಾಡಿದರು.
ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ವಿ.ಜಗನ್ನಾಥ್​, ಎಸ್ಸಿ-&ಎಸ್ಟಿ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಸಿ.ರಘುನಾಥ್​, ಮುಖ್ಯಶಿಕ್ಷಕ ಎಂ.ನಾರಾಯಣಸ್ವಾಮಿ, ಶಿಕ್ಷಕರ ಸಂಘದ ಗೌರವಾಧ್ಯಕ್ಷ ಕೆ.ಬಿ.ನಾಗರಾಜ್​, ಖಜಾಂಚಿ ಸೋಮಶೇಖರ್​ ಇದ್ದರು.