ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲಿ women  
ರಾಜ್ಯ

ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲಿ women

ಟೇಕಲ್:ಮಹಿಳೆಯರು ಸ್ವಂತ ಉದ್ಯೋಗದಿಂದ ಸ್ವಾವಲಂಬನೆಯ ಜೀವನ ನಡೆಸಲಿ ಎಂದು ಶಾಸಕ ಕೆ.ವೈ.ನಂಜೇಗೌಡ ತಿಳಿಸಿದರು.women
ಮಾಲೂರು ತಾಲೂಕು ಕೊಮ್ಮನಹಳ್ಳಿ ಶಾಸಕರ ನಿವಾಸ ಬಳಿ ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮದಿಂದ 37 ಮಹಿಳಾ ಫಲಾನುಭವಿಗಳಿಗೆ ಉಚಿತ ಹೊಲಿಗೆಯಂತ್ರ ವಿತರಿಸಿ ಮಾತನಾಡಿ, ಮಹಿಳೆಯರು ಸ್ವಾವಲಂಬನೆಯ ಜೀವನ ಮಾಡಲು ಕಾಂಗ್ರೆಸ್​ ಸರ್ಕಾರ ಜನಪರ ಯೋಜನೆ ಜಾರಿಗೆ ತಂದಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರಿಗೆ ಅನುಕೂಲವಾಗಿದೆ. ಬಡವರಿಗೆ ಸಿಗಬೇಕಾದ ಸೌಲಭ್ಯಗಳನ್ನು ಪಾರದರ್ಶಕವಾಗಿ ನೀಡುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯೆ ರತ್ನಮ್ಮ ನಂಜೇಗೌಡ ಮಾತನಾಡಿ, ಮಹಿಳೆಯರು ಮನೆಯಲ್ಲಿಯೇ ಟೈಲರ್​ ವೃತ್ತಿ ಮಾಡುವುದರಿಂದ ಬದುಕು ಕಟ್ಟಿಕೊಳ್ಳಬಹುದು. ಒಂದು ವಸ್ತ್ರ ತಯಾರಿಸಿದರೆ 500 ರಿಂದ 25ಸಾವಿರ ವರೆಗೂ ಸಂಪಾದನೆ ಮಾಡಬಹುದು. ಮನೆಯ ಯಜಮಾನರ ಜತೆ ಕೈ ಜೋಡಿಸಿ ಹೈನುಗಾರಿಕೆಯಲ್ಲಿ ತೊಡಗಿಕೊಳ್ಳಬೇಕು ಎಂದರು.
ಅರ್ಹ ಫಲಾನುಭವಿಗಳಿಗೆ ನೇರ ಸೌಲಭ್ಯಗಳನ್ನು ತಲುಪಿಸುವ ಮೂಲಕ ಸ್ವಾಭಿಮಾನಿ ಬದುಕಿಗೆ ದಾರಿ ಮಾಡಿಕೊಡುತ್ತಿದ್ದೇವೆ. ಯಾರೂ ಮಧ್ಯವರ್ತಿಗಳ ಕೈಗೆ ಸಿಲುಕದಿರಿ ಎಂದು ತಿಳಿಸಿದರು.
ಬನಹಳ್ಳಿ ಸತೀಶ್​, ಗ್ರಾಮ ಪಂಚಾಯಿತಿ ಸದಸ್ಯರಾದ ತಿಮ್ಮನಾಯಕನಹಳ್ಳಿ, ಮುನಿರಾಜ್​, ರಾಜಕುಮಾರ ಇದ್ದರು.