ರಾಮದುರ್ಗದಲ್ಲಿ ಹಮ್ಮಿಕೊಂಡಿದ್ದ ಬಹುಮಾನ ವಿತರಣಾ ಸಮಾರಂಭವನ್ನು ಚಂದ್ರಶೇಖರ ಸ್ವಾಮೀಜಿ ಉದ್ಘಾಟಿಸಿದರು. ಇಂದಿರಾ ಸೊರಟಿ, ಎಸ್​.ಎಂ ಸೊರಟಿ ಇತರರಿದ್ದರು. 
ರಾಜ್ಯ

ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳಲಿ

ರಾಮದುರ್ಗ: ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚುಟುವಟಿಕೆಗಳಲ್ಲಿ ಪಾಲ್ಗೊಂಡು ಸರ್ವತೋಮುಖ ಬೆಳವಣಿಗೆ ಹೊಂದಬೇಕು ಎಂದು ಮುಳ್ಳೂರ ಅನ್ನದಾನೇಶ್ವರ ಮಠದ ಚಂದ್ರಶೇಖರ ಸ್ವಾಮೀಜಿ ಹೇಳಿದರು.
ತಾಲೂಕಿನ ಮುಳ್ಳೂರ ಗ್ರಾಮದ ಆದರ್ಶ ವಿದ್ಯಾಮಂದಿರ ಶಾಲೆಯ 20ನೇ ವಾರ್ಷಿಕೋತ್ಸವ ನಿಮಿತ್ತ ವಾರ್ಷಿಕ ಕ್ರೀಡಾಕೂಟ ಹಾಗೂ ಸಾಂಸತಿಕ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಬಹುಮಾನ ವಿತರಣಾ ಸಮಾರಂಭದಲ್ಲಿ ಮಾತನಾಡಿ, ಆಧುನಿಕ ದಿನಗಳಲ್ಲಿ ವಿದ್ಯಾರ್ಥಿಗಳು ಭವಿಷ್ಯ ರೂಪಿಸಿಕೊಳ್ಳಲು ಅನುಕೂಲವಾಗುವಂತೆ ಶಿಣ ನೀಡಬೇಕು ಎಂದರು.
ಇಂದಿರಾ ಸೊರಟಿ ಮಾತನಾಡಿ, ಮಕ್ಕಳು ಶಾಲೆಯಲ್ಲಿ ನಡೆಯುವ ಎಲ್ಲ ಚಟುವಟಿಕೆಗಳಲ್ಲಿ ಪಾಲ್ಗೊಂಡು ಪ್ರಶಸ್ತಿ ಪಡೆದುಕೊಂಡಿದ್ದಾರೆ ಎಂದರು. ಎಸ್​.ಎಂ ಸೊರಟಿ ಸೇರಿದಂತೆ ಶಾಲಾ ಶಿಕಿಯರು ಇತರರಿದ್ದರು.