ರಾಮದುರ್ಗ ಬನ್ನೂರ ಗ್ರಾಮದಲ್ಲಿ ಜಿಪಂ ಸಿಇಒ ರಾಹುಲ ಶಿಂಧೆ ವಿವಿಧ ಕಾಮಗಾರಿ ಪರಿಶೀಲಿಸಿದರು. ರವಿ ಬಂಗಾರೆಪ್ಪನವರ, ಬಸವರಾಜ ಹೆಗ್ಗನಾಯಕ, ಬಸವರಾಜ, ಐನಾಪೂರೆ, ಸೋಮರಡ್ಡಿ ಹೊಂಗಲ, ಬಸವರಾಜ ಅಡವಿಮಠ ಇತರರಿದ್ದರು. 
ರಾಜ್ಯ

ಗ್ರಾಮಗಳ ಪ್ರಗತಿಗೆ ಶ್ರಮಿಸಲಿ

ಬೆಳಗಾವಿ: ಕಾಯಕ ಗ್ರಾಮ ಕಾರ್ಯಕ್ರಮದಡಿ ಗ್ರಾಮಗಳ ಅಭಿವೃದ್ಧಿಗೆ ಗ್ರಾಮ ಪಂಚಾಯಿತಿ ಶ್ರಮಿಸಬೇಕು ಜಿಪಂ ಸಿಇಒ ರಾಹುಲ ಶಿಂಧೆ ಸೂಚಿಸಿದರು.
ರಾಮದುರ್ಗ ತಾಲೂಕಿನ ಬನ್ನೂರ ಗ್ರಾಮದ ಗ್ರಾಪಂ ಕಾರ್ಯಾಲಯದ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಾಯಕ ಗ್ರಾಮ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯತೆ ವಹಿಸಿ ಮಾತನಾಡಿದ ಅವರು, ವಿವಿಧ ಇಲಾಖೆ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ 15 ದಿನದೊಳಗಾಗಿ ಗ್ರಾಮಸಭೆ ಆಯೋಜಿಸಿ, ಗ್ರಾಮದ ಸರ್ವತೋಮುಖ ಅಭಿವೃದ್ಧಿಗಾಗಿ ಯಾವ ಕಾರ್ಯಕ್ರಮ ರೂಪಿಸಬೇಕೆಂದು ರ್ನಿಣಯ ಕೈಗೊಳ್ಳಬೇಕು ಎಂದು ಸೂಚಿಸಿದರು.
ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಮಕ್ಕಳೊಂದಿಗೆ ಬಿಸಿಯೂಟ ಸೇವಿಸಿದರು. ಶಾಲೆಯಲ್ಲಿನ ಕುಂದುಕೊರತೆ, ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳ ಹಾಜರಾತಿ ಬಗ್ಗೆ ಮಾಹಿತಿ ಪಡೆದರು. ಜೆಜೆಎಂ ಕಾಮಗಾರಿ ಪರಿಶೀಲಿಸಿದರು. ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನವರ, ಉಪಕಾರ್ಯದರ್ಶಿಗಳಾದ ಬಸವರಾಜ ಹೆಗ್ಗನಾಯಕ, ಬಸವರಾಜ ಅಡವಿಮಠ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪೂರೆ, ಸಹಾಯಕ ನಿರ್ದೇಶಕ ಸೋಮರಡ್ಡಿ ಹೊಂಗಲ, ಮಾಲತೇಶ ದಾಸಪ್ಪನವರ, ಗ್ರಾಪಂ ಅಧ್ಯೆ ಲಕ್ಷಿ$್ಮ ಪೂಜಾರ, ಪಿಡಿಒ ಶ್ರೀದೇವಿ ಮಡಿವಾಳ ಇತರರಿದ್ದರು.