ಅರಕಲಗೂಡು ತಾಲೂಕಿನ ಲಕ್ಕೂರು ಸರ್ಕಾರಿ ಶಾಲೆಯ ಮಕ್ಕಳ ಮನೆಯಲ್ಲಿ ಗುರುವಾರ ಏರ್ಪಡಿಸಿದ್ದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಪುಟಾಣಿಗಳು ಶ್ರೀಕೃಷ್ಣ ಹಾಗೂ ರಾಧೆಯ ವೇಷಭೂಷಣ ಧರಿಸಿ ಸಂಭ್ರಮಿಸಿದರು. ರಕ್ಷಿತಾ, ಲತಾ, ಕವಿತಾ, ರೂಪಾ ಇದ್ದರು. 
ರಾಜ್ಯ

ಶ್ರೀಕೃಷ್ಣ, ರಾಧೆ ಧಿರಿಸಿನಲ್ಲಿ ಸಂಭ್ರಮಿಸಿದ ಚಿಣ್ಣರು

ಅರಕಲಗೂಡು: ತಾಲೂಕಿನ ಲಕ್ಕೂರು ಸರ್ಕಾರಿ ಶಾಲೆಯ ಮಕ್ಕಳ ಮನೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಗುರುವಾರ ಸಂಭ್ರಮದಿಂದ ಆಚರಿಸಲಾಯಿತು.

ಮಕ್ಕಳು ಶ್ರೀಕೃಷ್ಣ ಹಾಗೂ ರಾಧೆಯ ವೇಷಭೂಷಣ ಧರಿಸಿ, ಭಕ್ತಿಗೀತೆಗಳಿಗೆ ನೃತ್ಯ ಪ್ರದರ್ಶಿಸಿ ಗಮನ ಸೆಳೆದರು. ಮಕ್ಕಳ ನೃತ್ಯ ಪ್ರದರ್ಶನಕ್ಕೆ ಗ್ರಾಮಸ್ಥರು ಮತ್ತು ಪಾಲಕರು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಮಕ್ಕಳಿಗೆ ಶ್ರೀಕೃಷ್ಣನ ಜೀವನ ಹಾಗೂ ಬಾಲಲೀಲೆಗಳ ಕುರಿತು ಕಥೆಗಳ ಮೂಲಕ ತಿಳಿಸಿಕೊಡಲಾಯಿತು. ಶ್ಲೋಕಗಳು ಹಾಗೂ ಭಕ್ತಿಗೀತೆಗಳ ಮೂಲಕ ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ಮಹತ್ವವನ್ನು ಪರಿಚಯಿಸಲಾಯಿತು.

ಮುಖ್ಯ ಶಿಕ್ಷಕ ನಾಗರಾಜು ಮಾತನಾಡಿ, ಶಾಸಕ ಎ. ಮಂಜು ಅವರ ಮಾರ್ಗದರ್ಶನದಲ್ಲಿ ದೇವರಹಟ್ಟಿ ಫೌಂಡೇಶನ್ ಹಾಗೂ ಹಿರಿಯ ವಿದ್ಯಾರ್ಥಿಗಳ ಬಳಗದ ಸಹಕಾರದೊಂದಿಗೆ ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಪೂರ್ವ ಪ್ರಾಥಮಿಕ ಶಿಕ್ಷಣದ ಜತೆಗೆ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಸೃಜನಶೀಲ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದರು.

ಎಸ್‌ಡಿಎಂಸಿ ಅಧ್ಯಕ್ಷ ಕಾಳೇಗೌಡ ಮಾತನಾಡಿ, ಗ್ರಾಮೀಣ ಪ್ರದೇಶದ ಮಕ್ಕಳಿಗೂ ಉತ್ತಮ ಕಲಿಕಾ ಅನುಭವದೊಂದಿಗೆ ಸಮಾನ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಮಕ್ಕಳ ಮನೆಯಲ್ಲಿ ಇಂತಹ ಸಾಂಸ್ಕೃತಿಕ ಹಾಗೂ ಸೃಜನಶೀಲ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು. ಶಿಕ್ಷಕರಾದ ನವೀನ್, ರಕ್ಷಿತಾ, ಲತಾ, ಕವಿತಾ, ರೂಪಾ ಇತರರು ಇದ್ದರು.