ಗೌರಿಬಿದನೂರಿನ ತಾಲೂಕಿನ ಚೀಲಮಮಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಶಿಬಿರವನ್ನು ಕೃಷಿ ವಿವಿ ಡೀನ್ ಡಾ.ವೈ.ಎನ್. ಶಿವಲಿಂಗಯ್ಯ ಉದ್ಘಾಟಿಸಿದರು. ಪಶು ವೈದ್ಯಕಿಯ ಇಲಾಖೆ ತಾಲೂಕು ಸಹಾಯಕ ನಿರ್ದೇಶಕ ಡಾ.ಮಾರುತಿ, ಜಿಲ್ಲಾ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಸದಾಶಿವಯ್ಯ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಜಯಕುಮಾರ್, ಎನ್.ಮಂಜುಳಾ ಇದ್ದರು.
: ಬೆಂಗಳೂರಿನ ಜಿಕೆವಿಕೆ ಕೃಷಿ ಕಾಲೇಜಿನ ವಿದ್ಯಾರ್ಥಿಗಳಿಂದ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಅಂಗವಾಗಿ ತಾಲೂಕಿನ ಚೀಲಮಮಹಳ್ಳಿಯಲ್ಲಿ ಬರಡು ರಾಸುಗಳ ತಪಾಸಣೆ ಮತ್ತು ಪಶು ಆರೋಗ್ಯ ಚಿಕಿತ್ಸಾ ಶಿಬಿರ ಆಯೋಜಿಸಲಾಗಿತ್ತು.
ಗ್ರಾಮದ ಡೇರಿ ಹಾಗೂ ಕ್ರೆಡಿಟ್ ಆಕ್ಸಿಸ್ ಇಂಡಿಯಾ ಫೈನಾನ್ಸ್ ಪೆವೇಟ್ ಲಿಮಿಟೆಡ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಶಿಬಿರದಲ್ಲಿ ಜಾನುವಾರುಗಳ ಆರೋಗ್ಯ ತಪಾಸಣೆ ನಡೆಸಿ, ರೈತರಿಗೆ ಪಶುಗಳ ಆರೋಗ್ಯ ರಕ್ಷಣೆ, ಆರೈಕೆ, ಪೌಷ್ಟಿಕ ಆಹಾರ ಹಾಗೂ ರೋಗ ನಿಯಂತ್ರಣದ ಕುರಿತು ಮಾಹಿತಿ ನೀಡಲಾಯಿತು.
ಗ್ರಾಮಸ್ಥರು ಶಿಬಿರದ ಪ್ರಯೋಜನ ಪಡೆದರು.ವಿದ್ಯಾರ್ಥಿಗಳು ರೈತರೊಂದಿಗೆ ನೇರ ಸಂಪರ್ಕ ಹೊಂದಿ, ಕೃಷಿ ಹಾಗೂ ಪಶುಸಂಗೋಪನೆಗೆ ಸಂಬಂಧಿಸಿದ ಪ್ರಾಯೋಗಿಕ ಜ್ಞಾನ ಪಡೆದುಕೊಳ್ಳುವ ಜತೆಗೆ ರೈತರಿಗೆ ಮಾಹಿತಿ ನೀಡಲಾಯಿತು.