ರಾಮದುರ್ಗ ಪಟ್ಟಣದ ಶ್ರೀಮತಿ ಈರಮ್ಮ ಯಾದವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲಿ ್ಲ ಲೋಕಾಪುರ&ಧಾರವಾಡ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳು ಪತ್ರ ಚಳವಳಿ ನಡೆಸಿದರು. ನಿಂಗಪ್ಪ ಕರಿಗಾರ, ಶಶಿಕಾಂತ ನೆಲ್ಲೂರ, ಚಂದ್ರಕಾಂತ ಮಾಳದಕರ ಇತರರಿದ್ದರು. 
ರಾಜ್ಯ

ಲೋಕಾಪುರ, ಧಾರವಾಡ ರೈಲ್ವೆ ಮಾರ್ಗಕ್ಕೆ ಒತ್ತಾಯ

ರಾಮದುರ್ಗ: ಪಟ್ಟಣದ ಮಾರ್ಗವಾಗಿ ಲೋಕಾಪುರ&ಧಾರವಾಡ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಆಗ್ರಹಿಸಿ ರಾಮದುರ್ಗ ರೈಲ್ವೆ ಹೋರಾಟ ಕ್ರಿಯಾ ಸಮಿತಿ ನೇತೃತ್ವದಲ್ಲಿ ಸ್ಥಳಿಯ ಶ್ರೀಮತಿ ಈರಮ್ಮ ಯಾದವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಪತ್ರ ಚಳವಳಿ ನಡೆಯಿತು.
ರಾಮದುರ್ಗ ರೈಲ್ವೆ ಹೋರಾಟ ಕ್ರಿಯಾ ಸಮಿತಿ ಮುಖಂಡರು ಕಾಲೇಜು ವಿದ್ಯಾರ್ಥಿಗಳಿಂದ ರೈಲ್ವೆ ಸಚಿವ ಅಶ್ವಿನ್​ ವೈಷ್ಣವ, ರಾಜ್ಯ ರೈಲ್ವೆ ಸಚಿವ ವಿ.ಸೋಮಣ್ಣ,
ಸಂಸದ ಜಗದೀಶ ಶೆಟ್ಟರ ಹಾಗೂ ಹುಬ್ಬಳ್ಳಿ ರೈಲ್ವೆ ಮಹಾಪ್ರಬಂಧಕರಿಗೆ ಲೋಕಾಪುರ&ಧಾರವಾಡ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಅನುಮೋದನೆ ನೀಡುವಂತೆ ಪತ್ರ ಬರೆಯುವ ಮೂಲಕ ಒತ್ತಾಯಿಸಿದರು.
ಮುಖಂಡರಾದ ಶಫಿ ಬೆಣ್ಣಿ ಮಾತನಾಡಿ, ಲೋಕಾಪುರ&ಧಾರವಾಡ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಒತ್ತಾಯಿಸಿ ಹಲವಾರು ವರ್ಷಗಳಿಂದ ಹೋರಾಟ ನಡೆಯುತ್ತಿವೆ. ಜನಪ್ರತಿನಿಧಿಗಳು ಇಚ್ಛಾಶಕ್ತಿ ಪ್ರದರ್ಶಿಸಿ ಬಹುದಿನಗಳ ಬೇಡಿಕೆ ಈಡೇರಿಕೆಗೆ ಮುಂದಾಗಬೇಕೆಂದು ಆಗ್ರಹಿಸಿದರು. ಮುಖಂಡರಾದ ನಿಂಗಪ್ಪ ಕರಿಗಾರ, ಶಶಿಕಾಂತ ನೆಲ್ಲೂರ, ಚಂದ್ರಕಾಂತ ಮಾಳದಕರ, ಜಾವೀದ್​ ಯಾದವಾಡ, ಎ.ಆರ್​.ಪಠಾಣ, ಎಂ.ಕೆ.ಯಾದವಾಡ ಇತರರಿದ್ದರು.