Love is the charioteer of the sweet-smelling papa
electionಹುಳಿಯಾರು: ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನ ಯಾರಿಗೆ ಸಿಗಲಿದೆ ಎಂಬ ಪಟ್ಟಣದ ಜನರ ಕುತೂಹಲಕ್ಕೆ ತೆರೆ ಬಿದ್ದಿದ್ದು, ನೂತನ ಅಧ್ಯಕ್ಷರಾಗಿ ಪ್ರೀತಿ ರಾವೇಂದ್ರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ರತ್ನಮ್ಮರೇವಣ್ಣ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ಚುನಾವಣೆ ಏರ್ಪಡಿಸಲಾಗಿತ್ತು. ಅಧಿಕೃತ ವೇಳಾಪಟ್ಟಿಯಂತೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ನಾಮಪತ್ರ ಸಲ್ಲಿಕೆಗೆ ಸಮಯ ನಿಗದಿಪಡಿಸಲಾಗಿತ್ತು. ಪ್ರೀತಿ ರಾವೇಂದ್ರ ಅವರು ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಕೆ.ಪುರಂದರ ಅವರು ಅವಿರೋಧ ಆಯ್ಕೆಯನ್ನು ೂಷಿಸಿದರು.
ಈ ಬಾರಿ ಕೂಡ 3 ಪಕ್ಷದ ಮೈತ್ರಿಕೂಟ ಅಧಿಕಾರಕ್ಕೆ ಬಂದಿದ್ದು, ಬಿಜೆಪಿಯ ಮೂವರು, ಕಾಂಗ್ರೆಸ್ನ ನಾಲ್ವರು ಹಾಗೂ ಜೆಡಿಎಸ್ನ ಇಬ್ಬರು ಸದಸ್ಯರು ಸೇರಿ ಒಟ್ಟು 9 ಸದಸ್ಯರು ಪ್ರೀತಿ ರಾವೇಂದ್ರ ಅವರ ಅವಿರೋಧ ಆಯ್ಕೆಗೆ ಬೆಂಬಲ ಸೂಚಿಸಿದರು.
ಮಾಜಿ ಅಧ್ಯೆ ರತ್ನಮ್ಮ, ಹೇಮಂತ್ ಕುಮಾರ್, ಬಿ.ಬಿ.ಫಾತಿಮಾ, ಉಪಾಧ್ಯೆ ಕಾವ್ಯಾರಾಣಿ, ಮಂಜಾ ನಾಯ್ಕ, ಅಬೂಬುಕರ್ ಸಿದ್ದಿಕ್, ಮಹಮ್ಮದ್ ಜುಬೇರ್, ಎಸ್.ಆರ್.ಎಸ್.ದಯಾನಂದ್, ಬಡಿಗಿರಾಜು ಸೇರಿದಂತೆ ಎಲ್ಲ ಸದಸ್ಯರು ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು.
ತಮ್ಮನ್ನು ಬೆಂಬಲಿಸಿದ ಎಲ್ಲ ಸದಸ್ಯರಿಗೆ ಕೃತತೆ ಸಲ್ಲಿಸಿ ಮಾತನಾಡಿದ ನೂತನ ಅಧ್ಯೆ ಪ್ರೀತಿ, ನನ್ನನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿಕೊಳ್ಳಲು ಶಾಸಕ ಸಿ.ಬಿ.ಸುರೇಶ್ ಬಾಬು ಹಾಗೂ ಬೆಂಬಲಿಸಿದ ಸದಸ್ಯರ ಸಹಕಾರವೇ ಪ್ರಮುಖ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ಎಲ್ಲರೂ ಒಟ್ಟಾಗಿ, ಕೆಲಸ ಮಾಡಿ ಪಟ್ಟಣದ ಅಭಿವೃದ್ಧಿಗೆ ಶ್ರಮಿಸುವ ಸಂಕಲ್ಪ ವ್ಯಕ್ತಪಡಿಸಿದರು.
ಶಾಸಕ ಸಿ.ಬಿ. ಸುರೇಶ್ ಬಾಬು ಮಾತನಾಡಿ, ಅಧ್ಯಕ್ಷರ ಆಯ್ಕೆಯು ಪಾತೀತ ಹಾಗೂ ಜಾತ್ಯಾತಿತವಾಗಿ ನಡೆದಿದ್ದು, ಹುಳಿಯಾರು ಪಟ್ಟಣದ ಸಮಗ್ರ ಅಭಿವೃದ್ಧಿಗಾಗಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಈಗಾಗಲೇ ಹುಳಿಯಾರಿನ ಸಮಗ್ರ ಅಭಿವೃದ್ಧಿಗಾಗಿ ಪಂಚಾಯಿತಿ ಜತೆ ಇರುತ್ತೇನೆ. ಮನೆಮನೆಗೂ ಕುಡಿಯುವ ನೀರು ಸಂಪರ್ಕ ಕಾರ್ಯ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಪ್ರತಿ ಬೀದಿಗೂ ಸಿಸಿ ರಸ್ತೆ ಹಾಗೂ ಕಸ ವಿಲೇವಾರಿ ಟಕ ನಿರ್ಮಾಣಕ್ಕೆ ಒತ್ತು ನೀಡುವುದಾಗಿ ತಿಳಿಸಿದರು.
ಚುನಾವಣಾ ಪ್ರಕ್ರಿಯೆಯ ವೇಳೆ ಚುನಾವಣಾಧಿಕಾರಿ ಹಾಗೂ ಚಿಕ್ಕನಾಯಕನಹಳ್ಳಿ ತಹಸಿಲ್ದಾರ್ ಕೆ.ಪುರಂದರ್, ಸಾಲಾಪುರ ಪ್ರತಾಪ್, ಶ್ರೀನಿವಾಸ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಲ್.ವಿ.ಮಂಜುನಾಥ್, ಕಂದಾಯ ಅಧಿಕಾರಿ ಶ್ರುತಿ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.