ದಿಡಗ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಮಹೇಶ್ ಅವರನ್ನು ಸಂಘದ ವತಿಯಿಂದ ಅಭಿನಂದಿಸಲಾಯಿತು. ಪುಟ್ಟರಾಜು, ಎಂ.ಆರ್.ವಾಸು, ರಘುರಾಮ್, ಎಚ್.ಕೆ.ಯೋಗೇಶ್, ತಾತೇಗೌಡ, ಕುಮಾರ್ ಇತರರಿದ್ದರು. 
ರಾಜ್ಯ

ದಿಡಗ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಮಹೇಶ್ ಉಪಾಧ್ಯಕ್ಷ

ಪ್ರಮುಖ ಮುಖ್ಯಾಂಶಗಳು

  • ದಿಡಗ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ
  • ಪಾಧ್ಯಕ್ಷರಾಗಿ ಉಳ್ಳಾವಳ್ಳಿ ಗ್ರಾಮದ ಎಚ್.ಎಸ್.ಮಹೇಶ್ ಅವಿರೋಧ ಆಯ್ಕೆ
ಹಿರೀಸಾವೆ: ಹೋಬಳಿಯ ದಿಡಗ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರಾಗಿ ಉಳ್ಳಾವಳ್ಳಿ ಗ್ರಾಮದ ಎಚ್.ಎಸ್.ಮಹೇಶ್ ಅವಿರೋಧವಾಗಿ ಆಯ್ಕೆಯಾದರು.
ಇತ್ತೀಚೆಗೆ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಮಹೇಶ ಹೊರತುಪಡಿಸಿ ಬೇರಾರೂ ನಾಮಪತ್ರ ಸಲ್ಲಿಸದ ಕಾರಣ ಅವಿರೋಧ ಆಯ್ಕೆ ನಡೆಯಿತು. ನೂತನ ಉಪಾಧ್ಯಕ್ಷ ಮಹೇಶ್ ಮಾತನಾಡಿ, ಕಿರಿಯ ಕಾರ್ಯಕರ್ತರನ್ನು ಗುರುತಿಸಿ ಸ್ಥಾನ-ಮಾನ ನೀಡುವ ಮೂಲಕ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿರುವ ಎಚ್.ಡಿ.ದೇವೇಗೌಡ ಅವರಿಗೆ ಸಲ್ಲುತ್ತದೆ ಎಂದರು.
10 ಗುಂಟೆ ಜಮೀನು ಹೊಂದಿರುವ ರೈತನಿಗೂ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡುವ ಮೂಲಕ ರೈತ ವರ್ಗವನ್ನು ಮೇಲೆತ್ತುವ ಕಾರ್ಯದಲ್ಲಿ ಶ್ರಮಿಸುತ್ತಿರುವ ಕ್ಷೇತ್ರದ ಶಾಸಕ ಸಿ.ಎನ್.ಬಾಲಕೃಷ್ಣ ಅವರ ಕಾರ್ಯವೈಖರಿ ಶ್ಲಾಘನೀಯ ಎಂದು ಬಣ್ಣಿಸಿದರು.
ಇದೇ ವೇಳೆ ಮಹೇಶ್ ಅವರನ್ನು ಸಂಘದ ವತಿಯಿಂದ ಅಭಿನಂದಿಸಲಾಯಿತು. ಜೆಡಿಎಸ್ ಹಿರಿಯ ನಾಯಕರು ಹಾಗೂ ಕಾರ್ಯಕರ್ತರು ಅಭಿನಂದಿಸಿದರು. ಅಭಿಮಾನಿಗಳು ಸಿಹಿ ಹಂಚಿ ಸಂಭ್ರಮಿಸಿದರು. ತಾಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಪುಟ್ಟರಾಜು, ಎಂ.ಆರ್.ವಾಸು, ಎಪಿಎಂಸಿ ಮಾಜಿ ಅಧ್ಯಕ್ಷ ರಘುರಾಮ್, ಸಂಘದ ಅಧ್ಯಕ್ಷ ಎಚ್.ಕೆ.ಯೋಗೇಶ್, ಮಾಜಿ ಅಧ್ಯಕ್ಷ ತಾತೇಗೌಡ, ಮಾಜಿ ಉಪಾಧ್ಯಕ್ಷ ಕುಮಾರ್, ನಿರ್ದೇಶಕರಾದ ಮಧು, ಮಲ್ಲೇಗೌಡ, ವೆಂಕಟೇಶ್, ಬಾಲು, ತುಳಸಿ, ಪ್ರಮುಖರಾದ ಜೆ.ಎಸ್.ಮಂಜುನಾಥ್, ಜೆ.ಜೆ.ಧನಂಜಯ, ಜೆ.ಡಿ.ಮಂಜುನಾಥ್, ಸಂಘದ ಕಾರ್ಯ ನಿರ್ವಹಣಾಧಿಕಾರಿ ನಿಂಗಮ್ಮ ಇದ್ದರು.