Maintain good health and discipline.
ತೋವಿನಕೆರೆ: ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಬ್ಯಾಂಕ್ಗೆ ಬಂದು ಹೇಳಿಕೊಳ್ಳಬಹುದು. ಅವರ ಸಮಸ್ಯೆ ಬಗೆಹರಿಸಲು ನಾವು ಸದಾ ಸಿದ್ಧರಿದ್ದೇವೆ ಎಂದು ತೋವಿನಕೆರೆ ಎಸ್ಬಿಐ ಬ್ಯಾಂಕ್ ವ್ಯವಸ್ಥಾಪಕ ಪಿ.ನಿರಂಜನ್ ತಿಳಿಸಿದರು.
ಕೊರಟಗೆರೆ ತಾಲೂಕು ತೋವಿನಕೆರೆ ಗ್ರಾಪಂ ಆವರಣದಲ್ಲಿ ಆಯೋಜಿಸಿದ್ದ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿ, ವಿವಿಧ ಯೋಜನೆಗಳಾದ ಪ್ರಧಾನಮಂತ್ರಿ ಸುರಕ್ಷಾ ವಿಮಾ, ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆಯಲ್ಲಿ ಕಳೆದ ಆರ್ಥಿಕ ವರ್ಷದಲ್ಲಿ ಮರಣ ಹೊಂದಿದ 12 ಜನರ ಕುಟುಂಬಕ್ಕೆ ತಲಾ 2 ಲಕ್ಷ ರೂ. ನೀಡಲಾಗಿದೆ. ಈ ಯೋಜನೆಗಳು ಸಾರ್ವಜನಿಕರಿಗೆ ತಲುಪುವಂತೆ ಮಾಡುವುದು ಸೇವಪ್ರತಿನಿಧಿಗಳ ಕರ್ತವ್ಯ ಎಂದು ತಿಳಿಸಿದರು.
ಗ್ರಾಹಕ ಸೇವಕೇಂದ್ರ ಹಾಗೂ ಎಸ್ಬಿಐ ಬ್ಯಾಂಕ್ನಲ್ಲಿ ಗ್ರಾಹಕರಿಗೆ ಅನುಕೂಲಕರವಾದ ಯೋಜನೆಗಳನ್ನು ಮಾಡಿಸಿಕೊಳ್ಳಬಹುದು. ಈ ಯೋಜನೆಗಳಿಂದ ಅನೇಕ ನೊಂದ ಕುಟುಂಬಗಳಿಗೆ ಆರ್ಥಿಕ ಸಹಾಯ ಧನವನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.