ಶಿಡ್ಲಟ್ಟದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಸಾಮೂಹಿಕ ವರಮಹಾಲಕ್ಷಿ$್ಮ ಪೂಜೆ, ಧಾರ್ಮಿಕ ಸಭಾ ಕಾರ್ಯಕ್ರಮವನ್ನು ವಿಜಯಪುರ ಬಸವ ಕಲ್ಯಾಣ ಮಂಟಪದ ಶ್ರೀ ಮಹದೇವ ಸ್ವಾಮೀಜಿ ಉದ್ಘಾಟಿಸಿದರು.ತಾಲೂಕು ಯೋಜನಾಧಿಕಾರಿ ಪ್ರಕಾಶ್ ನಾಯಕ್, ಜನಜಾಗೃತಿ ಸದಸ್ಯರಾದ ಎ.ಎಂ.ತ್ಯಾಗರಾಜ್, ಎಚ್.ಸುರೇಶ್ ಇದ್ದರು.
ಶಿಡ್ಲಟ್ಟ :ಗ್ರಾಮೀಣ ಜನರ ಆರ್ಥಿಕ, ಸಾಮಾಜಿಕ ಅಭಿವೃದ್ಧಿ ಹಾಗೂ ಮಹಿಳಾ ಸಬಲೀಕರಣದ ಜತೆಗೆ ಕುಟುಂಬದಲ್ಲಿ ಸಾಮರಸ್ಯ ಬೆಳೆಸುವ ಮೂಲಕ ಸುಸ್ಥಿರ ಸಮಾಜ ನಿರ್ಮಾಣಕ್ಕೆ ಶ್ರಮಿಸುತ್ತಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯ ಶ್ಲಾನೀಯ ಎಂದು ವಿಜಯಪುರ ಬಸವ ಕಲ್ಯಾಣ ಮಂಟಪದ ಶ್ರೀ ಮಹದೇವ ಸ್ವಾಮೀಜಿ ಹೇಳಿದರು.
ನಗರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಸಾಮೂಹಿಕ ಶ್ರೀ ವರಮಹಾಲಕ್ಷಿ$್ಮ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜ್ಞಾನವಿಕಾಸ ಕೇಂದ್ರಗಳ ಮೂಲಕ ಮಹಿಳೆಯರಿಗೆ ಆರೋಗ್ಯ, ಶಿಕ್ಷಣ, ಕುಟುಂಬ ನಿರ್ವಹಣೆ, ಕಾನೂನು ಅರಿವು ಹಾಗೂ ಸಾಮಾಜಿಕ ಜವಾಬ್ದಾರಿಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ತಾಲೂಕು ಯೋಜನಾಧಿಕಾರಿ ಪ್ರಕಾಶ್ ನಾಯಕ್ ಮಾತನಾಡಿ, ಸಂಸ್ಥೆಯ ಗ್ರಾಮಾಭಿವೃದ್ಧಿ ಕನಸಿನ ಕೂಸಾಗಿ ಆರಂಭವಾದ ಯೋಜನೆ ಕರ್ನಾಟಕದ ಹಳ್ಳಿ ಹಳ್ಳಿಯಲ್ಲೂ ಸೇವೆಯನ್ನು ವಿಸ್ತರಿಸಿದೆ. ಗ್ರಾಮೀಣ ಪರಿವರ್ತನೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೊಸ ಭಾಷ್ಯ ಬರೆದಿದೆ.
ಮಹಿಳಾ ಸಬಲೀಕರಣಕ್ಕಾಗಿ ಸ್ವಸಹಾಯ ಸಂಗಳು ಹಾಗೂ ಜ್ಞಾನವಿಕಾಸ ಕೇಂದ್ರಗಳ ಮೂಲಕ ಮಹಿಳೆಯರನ್ನು ಒಗ್ಗೂಡಿಸಲಾಗುತ್ತಿದೆ. ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪ್ರೋತ್ಸಾಹಿಸಲಾಗುತ್ತಿದೆ.ಅದರ ಭಾಗವಾಗಿ ಮಹಿಳೆಯರು ಒಂದೆಡೆ ಸೇರಿ ವರಮಹಾಲಕ್ಷಿ$್ಮ ವ್ರತ ಹಾಗೂ ಪೂಜೆ ನೆರವೇರಿಸುತ್ತಿದ್ದಾರೆ.
ಶಿಡ್ಲಟ್ಟದ ಜನರ ಪ್ರಮುಖ ಜೀವನಾಧಾರವಾಗಿರುವ ರೇಷ್ಮೆ ೇತ್ರದ ಅಭಿವೃದ್ಧಿಗೂ ಯೋಜನೆ ವತಿಯಿಂದ ಆರ್ಥಿಕ ಸಹಾಯ, ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಜನಜಾಗೃತಿ ಸದಸ್ಯರಾದ ಎ.ಎಂ.ತ್ಯಾಗರಾಜ್, ಎಚ್.ಸುರೇಶ್, ಲಿಯೋ ಕ್ಲಬ್ ಅಧ್ಯಕ್ಷ ಶ್ರೀಕಾಂತ್, ಯೋಜನೆ ಪದಾಧಿಕಾರಿಗಳು, ಜ್ಞಾನವಿಕಾಸ ಕೇಂದ್ರಗಳ ಸದಸ್ಯರು ಇದ್ದರು.