ಸರ್ಕಾರಿ ಹಿರಿಯ ಪ್ರಾಥಮಿಕ Food ಶಾಲೆಯಲ್ಲಿ ತರಬೇತಿ ಕಾರ್ಯಾಗಾರ 
ರಾಜ್ಯ

ಬಿಸಿಯೂಟದಲ್ಲಿ ಗುಣಮಟ್ಟ ಕಾಯ್ದುಕೊಳ್ಳಿ Food

ಪ್ರಮುಖ ಮುಖ್ಯಾಂಶಗಳು

  • ಅಕ್ಷರ ದಾಸೋಹ ಜಿಲ್ಲಾ ಶಿಕ್ಷಣಾಧಿಕಾರಿ ತಿಮ್ಮರಾಯಪ್ಪ ಕರೆ
ವೇಮಗಲ್​: ಶಾಲೆಯಲ್ಲಿ ಬಿಸಿಯೂಟ ತಯಾರಿಸುವ ಸಿಬ್ಬಂದಿ ಊಟದಲ್ಲಿ ಶುಚಿ, Food ರುಚಿ, ಗುಣಮಟ್ಟ ಇರುವಂತೆ ನೋಡಿಕೊಳ್ಳಬೇಕು ಎಂದು ಅಕ್ಷರ ದಾಸೋಹ ಜಿಲ್ಲಾ ಶಿಕ್ಷಣಾಧಿಕಾರಿ ತಿಮ್ಮರಾಯಪ್ಪ ಹೇಳಿದರು.
ಕೋಲಾರ ತಾಲೂಕು ವೇಮಗಲ್​ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಧಾನ ಮಂತ್ರಿ ಶಕ್ತಿ ಪೋಷಣ್​ ನಿರ್ಮಾಣ ಯೋಜನೆಯಡಿ ಹೋಬಳಿಯ ಸರ್ಕಾರಿ, ಅನುದಾನಿತ ಶಾಲಾ ಅಡುಗೆ ಸಿಬ್ಬಂದಿಗೆ ಭಾನುವಾರ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.
ಅಡುಗೆ ಸಿಬ್ಬಂದಿ ವಿದ್ಯಾರ್ಥಿಗಳನ್ನು ನಿಮ್ಮ ಮಕ್ಕಳೆಂದೇ ಪರಿಗಣಿಸಿ, ಅವರನ್ನು ಪ್ರೀತಿಯಿಂದ ಕಾಣಬೇಕು. ಇದರಿಂದ ನಿಮ್ಮ ಮಕ್ಕಳಿಗೂ ಶ್ರೇಯಸ್ಕರ ಎಂದು ಕಿವಿಮಾತು ಹೇಳಿದರು.
ಅಡುಗೆ ಕೋಣೆ ಶುಭ್ರವಾಗಿದ್ದರೆ ಅಡುಗೆಯಲ್ಲಿ ಶುಚಿತ್ವ ಕಾಪಾಡಲು ಸಾಧ್ಯ. ಪಾತ್ರೆಗಳ ಸ್ವಚ್ಛತೆ, ಶುದ್ಧ ಕುಡಿಯುವ ನೀರು, ಗುಣಮಟ್ಟದ ತರಕಾರಿ ಬಳಕೆಯಿಂದ ಮಕ್ಕಳ ಆರೋಗ್ಯ ರಕ್ಷಣೆಗೂ ಸಹಕಾರಿಯಾಗಲಿದ್ದು, ಈ ನಿಟ್ಟಿನಲ್ಲಿ ಸಿಬ್ಬಂದಿ ಜವಾಬ್ದಾರಿಯಿಂದಿರಿ. ಅಕ್ಷರ ದಾಸೋಹ ಕಾರ್ಯಕ್ರಮವನ್ನು ತಾಲೂಕಿನಾದ್ಯಂತ ಯಶಸ್ವಿಯಾಗಿ ನಿರ್ವಹಿಸಿಕೊಂಡು ಬರಲಾಗುತ್ತದೆ. ಲೆಕ್ಕಪತ್ರಗಳನ್ನು ಸರಿಯಾಗಿ ನಿರ್ವಹಣೆಯೊಂದಿಗೆ ಮಕ್ಕಳ ಹಾಜರಾತಿಗೆ ತಕ್ಕಂತೆ ಧಾನ್ಯಗಳ ಬಳಕೆ, ಸಂಗ್ರಹಣೆ ಇರಬೇಕು ಎಂದರು.
ಸಹಾಯಕ ನಿರ್ದೇಶಕ ಟಿ.ಎಸ್​.ಸುಬ್ರಮಣಿ ಮಾತನಾಡಿ, ಮಕ್ಕಳ ಆರೋಗ್ಯ ಕಾಪಾಡುವುದು ಶಿಕ್ಷಕರೊಂದಿಗೆ ಅಡುಗೆ ಸಿಬ್ಬಂದಿಯ ಜವಾಬ್ದಾರಿ. ಅಡುಗೆ ಮನೆಯಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ. ಜೇಡರ ಬಲೆ, ಹಲ್ಲಿ, ಇಲಿ, ಹೆಗ್ಗಣಗಳು ಬಾರದಂತೆ ಎಚ್ಚರವಹಿಸುವಂತೆ ತಿಳಿಸಿದರು.
ಆರೋಗ್ಯ ಶಿಕ್ಷಣಾಧಿಕಾರಿ ಗೀತಾ ಮಾತನಾಡಿ, ಸಾಂಕ್ರಾಮಿಕ ರೋಗಗಳ ತಡೆ, ಸೊಳ್ಳೆಗಳ ನಾಶ ಮತ್ತಿತರ ಆರೋಗ್ಯ ರಕ್ಷಣಾ ಕಾರ್ಯಕ್ರಮಗಳ ಕುರಿತು ಮಕ್ಕಳಿಗೆ ಅರಿವು ನೀಡಿದರು.
ಅಗ್ನಿಶಾಮಕ ಠಾಣಾಧಿಕಾರಿ ಶ್ರೀನಾಥ್​, ಅಗ್ನಿ ಅವಘಡ ಎದುರಾದಾಗ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಪ್ರಾತ್ಯಕ್ಷಿಕೆ ಮೂಲಕ ತಿಳಿಸಿ, ಸಿಲೆಂಡರ್​ ಬಳಸುವಾಗ ಎಚ್ಚರವಹಿಸಿ ನಿಗದಿತ ಕಾಲಕ್ಕೆ ಗ್ಯಾಸ್​ ಪೈಪ್​ ಬದಲಿಸಿ, ಸ್ಟೌ ಸ್ವಚ್ಛತೆ ಹಾಗೂ ಅಡುಗೆ ನಂತರ ರೆಗ್ಯುಲೇಟರ್​ ಬಂದ್​ ಮಾಡುವಂತೆ ಸಲಹೆ ನೀಡಿದರು.
ಶ್ರೀ ಗುರು ಚೈತನ್ಯಗ್ಯಾಸ್​ ಏಜೆನ್ಸಿಯ ಗುರುರಾಜ್​, ಕ್ಯಾಲನೂರು ಸಿಆರ್​ಪಿ ದಿವ್ಯಾ, ಮುಖ್ಯಶಿಕ್ಷಕಿ ಪ್ರಮೀಳಾ, ದೈಹಿಕ ಶಿಕ್ಷಣ ಶಿಕ್ಷಕ ವೆಂಕಟೇಶ್​ ಹಾಗೂ ಸಿಬ್ಬಂದಿ ಇದ್ದರು.
ಕೋಲಾರ ತಾಲೂಕು ವೇಮಗಲ್​ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಡುಗೆ ಸಿಬ್ಬಂದಿಗಾಗಿ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಜಿಲ್ಲಾ ಶಿಕ್ಷಣಾಧಿಕಾರಿ ತಿಮ್ಮರಾಯಪ್ಪ, ಸಹಾಯಕ ನಿರ್ದೇಶಕ ಟಿ.ಎಸ್​.ಸುಬ್ರಮಣಿ, ಅಗ್ನಿಶಾಮಕ ಠಾಣಾಧಿಕಾರಿ ಶ್ರೀನಾಥ್​ ಇದ್ದರು.