ಕೊಳ್ಳೇಗಾಲದ ನ್ಯಾಷನಲ್ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಗ್ರಂಥಾಲಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎ.ಆರ್.ಕೃಷ್ಣಮೂರ್ತಿ ಚಾಲನೆ ನೀಡಿದರು. ಮಂಜುಳಾ, ಕುಮಾರ್, ಮಹದೇವ ಕುಮಾರ್, ರಾಜೇಂದ್ರ, ಬಿ.ತೋಟೇಶ್, ರಮೇಶ್, ಚೇತನ್ ದೊರೈರಾಜ್ ಇತರರು ಇದ್ದರು.
- ಶಾಸಕ ಎ.ಆರ್.ಕೃಷ್ಣಮೂರ್ತಿ
- ನ್ಯಾಷನಲ್ ಹಿರಿಯ ಪ್ರಾಥಮಿಕ ಶಾಲೆ ಆವರಣ
ಕೊಳ್ಳೇಗಾಲ:
ಮುಖ್ಯಮಂತ್ರಿ ಅನುದಾನದಲ್ಲಿ 75 ಲಕ್ಷ ರೂ.ವೆಚ್ಚದಲ್ಲಿ ಗ್ರಂಥಾಲಯ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು, ಮುಂದಿನ ಮಾರ್ಚ್ ತಿಂಗಳೊಳಗೆ ಪೂರ್ಣಗೊಳ್ಳಲಿದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ತಿಳಿಸಿದರು.
ಪಟ್ಟಣದ ನ್ಯಾಷನಲ್ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ 75 ಲಕ್ಷ ರೂ.ವೆಚ್ಚದಲ್ಲಿ ಗ್ರಂಥಾಲಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಸಲಹೆ ನೀಡಿದರು.
ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಮಧ್ಯಾಹ್ನದ ಬಿಸಿಯೂಟವನ್ನು ಇದೇ ವೇಳೆ ಸ್ವತಃ ಸವಿದ ಶಾಸಕರು, ಆಹಾರದ ಗುಣಮಟ್ಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರಲ್ಲದೆ, ವಿದ್ಯಾರ್ಥಿಗಳಿಂದ ಬಿಸಿಯೂಟ ವ್ಯವಸ್ಥೆ ಕುರಿತು ಮಾಹಿತಿ ಪಡೆದರು.
ಮಕ್ಕಳಿಗೆ ನೀಡುವ ಆಹಾರದಲ್ಲಿ ಶುಚಿತ್ವ, ಗುಣಮಟ್ಟ ಹಾಗೂ ಪೌಷ್ಟಿಕಾಂಶಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ವಿದ್ಯಾರ್ಥಿಗಳ ಆರೋಗ್ಯ ಮತ್ತು ಬೆಳವಣಿಗೆ ದೃಷ್ಟಿಯಿಂದ ಪ್ರತಿದಿನವೂ ಗುಣಮಟ್ಟ ಹಾಗೂ ಪೌಷ್ಟಿಕ ಆಹಾರ ನೀಡುವಂತೆ ಸಲಹೆ ನೀಡಿದರು.
ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜೇಂದ್ರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ಕಾರ್ಯದರ್ಶಿ ಬಸ್ತೀಪುರ ರವಿ, ತಾಪಂ ಇಒ ಕುಮಾರ್, ಬಿಇಒ ಮಂಜುಳಾ, ಬಿಆರ್‌ಸಿ ಮಹದೇವ ಕುಮಾರ್, ಜಿಪಂ ಮಾಜಿ ಸದಸ್ಯ ಮಲ್ ನಾಗರಾಜು, ನಗರಸಭೆ ಮಾಜಿ ಅಧ್ಯಕ್ಷ ರಮೇಶ್, ರಾಜ್ಯ ಯುವ ಕಾಂಗ್ರೆಸ್ ಮಾಜಿ ಕಾರ್ಯದರ್ಶಿ ಚೇತನ್ ದೊರೈರಾಜ್, ಶಿಕ್ಷಕ ಶ್ರೀಧರ್, ಜಿ.ಪಂ ಇಂಜಿನಿಯರ್ ಮಂಜು, ನ್ಯಾಷನಲ್ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸುನೀತಾ, ಎಸ್‌ಡಿಎಂಸಿ ಅಧ್ಯಕ್ಷ ಚಂದ್ರಶೇಖರ್, ಸಹ ಶಿಕ್ಷಕರಾದ ಪುಟ್ಟರಾಜು, ಪರಶಿವಮೂರ್ತಿ, ಬಸವರಾಜು ಇತರರಿದ್ದರು.