ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ school
- ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ವೆಂಕಟೇಶಪ್ಪ ಹೇಳಿಕೆ
ಬಾಗೇಪಲ್ಲಿ: ಶಿಕ್ಷಣ ಎಂಬುದು ಮಕ್ಕಳ ಭವಿಷ್ಯಕ್ಕೆ ಆಸ್ತಿ ಆಗಿರುವ ಹಿನ್ನಲೆಯಲ್ಲಿ ಪಾಲಕರು ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ ಯಾವುದೇ ಕಾರಣಕ್ಕೂ ಶಾಲೆಯಿಂದ ಹೊರಗುಳಿಸಬೇಡಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ವೆಂಕಟೇಶಪ್ಪ ತಿಳಿಸಿದರು. school
ಪಟ್ಟಣದ ಸರ್ಕಾರಿ ಬಾಲಕರ ಹಿರಿಯ ಮಾದರಿ ಶಾಲೆಯಲ್ಲಿ ಶಾಲಾ ಆಡಳಿತ ಮಂಡಳಿಯಿಂದ ಅಯೋಜಿಸಿದ್ದ ಪ್ರತಿಬಿಂಬ ಪುಸ್ತಕ ಬಿಡುಗಡೆ ಹಾಗೂ 2025ನೇ ವರ್ಷ ಶಾಲಾ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು.
ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆದಿರುವ ಮಕ್ಕಳು ಸಮಾಜದ ಉನ್ನತ ಹುದ್ದೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಇಂದಿನ ಸರ್ಕಾರಿ ಶಾಲೆಗಳಲ್ಲಿ ಅಂಗ್ಲ ಮಾಧ್ಯಮದ ಕಲಿಕೆ ಜತೆಗೆ ಕಂಪ್ಯೂಟರ್ ಶಿಕ್ಷಣ ನೀಡಲಾಗುತ್ತಿದೆ.ವಿದ್ಯಾವಂತ ಮಕ್ಕಳಿಗೆ ಸೌಲಭ್ಯಗಳನ್ನು ಸರ್ಕಾರಿ ಶಾಲೆಗಳಲ್ಲಿ ಲಭ್ಯ ಇರುವುದರಿಂದ ಅಲ್ಲಿ ಓದಿರುವ ವಿದ್ಯಾರ್ಥಿಗಳು ವೈದ್ಯರಾಗಿದ್ದಾರೆ. ಇಂಜಿನಿಯರ್, ಐಎಎಸ್, ಐಪಿಎಸ್, ಪತ್ರಕರ್ತರಾಗಿದ್ದಾರೆ ಇದಕ್ಕೆ ಕಣ್ಮುಂದೆಯೇ ಸಾಗಳಿವೆ. ಯಾವುದೇ ರೀತಿಯ ಖಾಸಗಿ ಶಾಲೆಗೆ ಕಡಿಮೆ ಇಲ್ಲದ ರೀತಿಯಲ್ಲಿ ಸರ್ಕಾರಿ ಶಾಲೆಯ ಶಿಕ್ಷಕರು ವಿದ್ಯಾಭ್ಯಾಸ ನೀಡುವುದರ ಜತೆಗೆ ಮಧ್ಯಾಹ್ನದ ಬಿಸಿಯೂಟ, ಶೂ, ಪಠ್ಯಪುಸ್ತಕ, ಪ್ರವಾಸ, ವಿದ್ಯಾರ್ಥಿ ವೇತನ ಹತ್ತಾರು ಸೌಲಭ್ಯಗಳನ್ನು ಶಿಕ್ಷಣ ಇಲಾಖೆ ನೀಡುತ್ತಿದೆ. ಆದ್ದರಿಂದ ಭವಿಷ್ಯದ ಮಕ್ಕಳಿಗೆ ಆಸ್ತಿ ಮಾಡುವುದರ ಬದಲಿಗೆ ಶಾಲೆಗೆ ಕಳುಹಿಸಿ ಶಿಕ್ಷಣ ಕೊಡಿಸಿ ಶಿಕ್ಷಣವನ್ನೆ ಆಸ್ತಿಯನ್ನಾಗಿ ಮಾಡಿ ಎಂದರು.
ಬಿಆರ್ಸಿ ವೆಂಕಟರಾಮಪ್ಪ ಮಾತನಾಡಿ, ಕೆಲ ಕೂಲಿ ಕಾರ್ಮಿಕರು ಮಕ್ಕಳನ್ನು ಚಿಕ್ಕವಯಸ್ಸಿನಲ್ಲೆ ಮನೆ ಕೆಲಸಕ್ಕೆ ಸೀಮಿತಗೊಳಿಸುತ್ತಿದ್ದಾರೆ. ಇದರಿಂದ ಮಕ್ಕಳ ನೂರು ವರ್ಷಗಳ ಭವಿಷ್ಯ ಮೊಗ್ಗಿನ ಹಂತದಲ್ಲೆ ಬಾಡುತ್ತಿದೆ. ಪಾಲಕರು ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸಕಾರತ್ಮಕವಾಗಿ ಸ್ಪಂದಿಸಿ ಮಕ್ಕಳ ಭವಿಷ್ಯದ ಬಗ್ಗೆ ಯೋಚಿಸಿ ಎಂದರು.
ಪಟ್ಟಣದ ಸರ್ಕಾರಿ ಬಾಲಕರ ಹಿರಿಯ ಮಾದರಿ ಶಾಲೆಯ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ರಚಿಸಿರುವ ಪ್ರತಿಬಿಂಬ ಎಂಬ ಪುಸ್ತಕವನ್ನು ಗಣ್ಯರು ಬಿಡುಗಡೆಗೊಳಿಸಿ, ವಿವಿಧ ಕ್ರೀಡಾ ಹಾಗೂ ಸಾಂಸತಿಕ ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಿರುವ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.
ಸರ್ಕಾರಿ ನೌಕರರ ಸಂದ ತಾಲೂಕು ಅಧ್ಯಕ್ಷ ಆರ್.ಹನುಮಂತರೆಡ್ಡಿ, ಎಸ್ಡಿಎಂಸಿ ಅಧ್ಯಕ್ಷ ಶ್ರೀನಿವಾಸ್, ಉಪಾಧ್ಯೆ ಲ್ಮ, ಮಾಜಿ ಅಧ್ಯಕ್ಷ ಬಿ.ಎ.ಬಾಬಾಜಾನ್, ಬಿಆರ್ಪಿ ಮಂಜುನಾಥ್, ಮುಖ್ಯಶಿಕ್ಷಕ ಶ್ರೀನಿವಾಸ್, ದಾನಿಗಳಾದ ಶ್ವೇತಾ ಮತ್ತಿತರರು ಇದ್ದರು.