ಹುಲಸೂರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ತಾಪಂ ಇಒ ಮಹಾದೇವ ಜಮ್ಮು ಅವರ ಅಧ್ಯತೆಯಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಯಿತು. ಪಿಡಿಒಗಳಾದ ವಿನಯ ಕುಮಾರ, ಸಿದ್ದಲಿಂಗ ಪದ್ಮ, ಮಹಾರುದ್ರಪ್ಪ ಭರಮಶೆಟ್ಟೆ, ಜ್ಯೋತಿ ಕಾವಡೆ ಇತರರಿದ್ದರು.
- ಇಒ ಮಹಾದೇವ ಜಮ್ಮು ಸೂಚನೆ
- ಹುಲಸೂರಿನಲ್ಲಿ ಪ್ರಗತಿ ಪರಿಶೀಲನಾ ಸಭೆ
ಹುಲಸೂರು: ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದು, ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮಕೈಗೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಮಹಾದೇವ ಜಮ್ಮು ಹೇಳಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಪ್ರಗತಿಪರಿಶೀಲನೆ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಕುಡಿಯುವ ನೀರು ಸರಬರಾಜು ಮಾಡುವ ಕೊಳವೆ ಬಾವಿ ಕೆಟ್ಟು ಹೋದರೆ ಸಿಬ್ಬಂದಿಯಿಂದ ಮಾಹಿತಿ ಪಡೆದು ತಣವೇ ರಿಪೇರಿ ಮಾಡಿ ಸಾರ್ವಜನಿಕರ ದೂರು ಬರೆದಂತೆ ಪಿಡಿಒಗಳು ನಿಗಾ ವಹಿಸಬೇಕು ಎಂದು ಸೂಚಿಸಿದರು.
ಪಿಡಿಒಗಳಾದ ವಿನಯ ಕುಮಾರ, ಸಿದ್ದಲಿಂಗ ಪದ್ಮ, ಮಹಾರುದ್ರಪ್ಪ ಭರಮಶೆಟ್ಟೆ, ಜ್ಯೋತಿ ಕಾವಡೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.