ಜಿಲ್ಲೆಯವರನ್ನೇ ಉಸ್ತುವಾರಿಯನ್ನಾಗಿ ಮಾಡಿ people
ಮುಳಬಾಗಿಲು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿ ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿದ ನಂತರ ಜಿಲ್ಲೆಯ ಕಾಂಗ್ರೆಸ್ ಶಾಸಕರಲ್ಲಿ ಒಬ್ಬರನ್ನು ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕ ಮಾಡಿ ಜಿಲ್ಲೆಯ ಸಮಸ್ಯೆಗಳಿಗೆ ಪರಿಹಾರ ನೀಡಲು ಮುಂದಾಗಬೇಕು ಜೆಡಿಎಸ್ ಶಾಸಕ ಸಮೃದ್ಧಿ ವಿ. ಮಂಜುನಾಥ್ ಹೇಳಿದರು. people
ತಾಲೂಕು ಪಂಚಾಯಿತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳ ಪೈಕಿ 4ರಲ್ಲಿ ಕಾಂಗ್ರೆಸ್ 2ರಲ್ಲಿ ಜೆಡಿಎಸ್ ಶಾಸಕರಿದ್ದು, ರಾಜ್ಯದಲ್ಲಿ ಆಡಳಿತರೂಢ ಕಾಂಗ್ರೆಸ್ ಅಧಿಕಾರದಲ್ಲಿದ್ದು, ಈಗ ಜಿಲ್ಲೆಯ ಹಿರಿಯ ಕಾಂಗ್ರೆಸ್ ಶಾಸಕರಲ್ಲಿ ಒಬ್ಬರಾಗಿರುವ ಬಂಗಾರಪೇಟೆಯ ಎಸ್. ಎನ್. ನಾರಾಯಣಸ್ವಾಮಿ 3 ಮೂರು ಬಾರಿ ನಿರಂತರವಾಗಿ ಶಾಸಕರಾಗಿದ್ದು, ಅವರು ಸೇರಿ ಉಳಿದ ಕಾಂಗ್ರೆಸ್ ಶಾಸಕರಲ್ಲಿ ಒಬ್ಬರನ್ನು ಸಂಪುಟಕ್ಕೆ ತೆಗೆದುಕೊಂಡು ಜಿಲ್ಲೆ ಉಸ್ತುವಾರಿ ಸಚಿವರಾಗಿ ನೇಮಕ ಮಾಡಿ ಸ್ಥಳಿಯ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನ ಮಾಡಬೇಕು ಎಂದು ಆಗ್ರಹಿಸಿದರು.
ಉಸ್ತುವಾರಿ ಸಿಎಂ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೂಲತ@ ಜೆಡಿಎಸ್ ಮತ್ತು ಜನತಾ ಪರಿವಾರದರು. ಅದೇ ರೀತಿ ಹಲವಾರು ಸಚಿವರು ನಮ್ಮ ಮೂಲದವರೇ ಆಗಿದ್ದರೂ ಜನತಾದಳ ನಾಯಕರನ್ನು ತಯಾರಿಸುವ ಫ್ಯಾಕ್ಟರಿ. ಆದರೆ ಈಗ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಿದ್ದು, ಹಿಂದೆ ಸಿದ್ದರಾಮಯ್ಯ ಅವರು ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಿಗೆ 800 ಕೋಟಿ ರೂ. ಅನುದಾನ ನೀಡುವುದಾಗಿ ಭರವಸೆ ನೀಡಿದ್ದು, ಇತರ ಮುಖ್ಯಮಂತ್ರಿಗಳು ಇದನ್ನು ಬಿಡುಗಡೆ ಮಾಡಬೇಕು. ನಮ್ಮ ಕ್ಷೇತ್ರಕ್ಕೂ 200 ಕೋಟಿ ಅನುದಾನ ಬಿಡುಗಡೆ ವಿಶ್ವಾಸವಿದೆ ಎಂದರು.