ಬೆಟ್ಟದಪುರ ಸಮೀಪದ ಕಣಗಾಲು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಭೇಟಿ ನೀಡಿದ ಶಾಸಕ ಕೆ.ವೆಂಕಟೇಶ್ ಅವರನ್ನು ಸನ್ಮಾನಿಸಿ, ಅಭಿನಂದನೆ ಸಲ್ಲಿಸಲಾಯಿತು. ನಿತಿನ್ ವೆಂಕಟೇಶ್, ಲೋಕೇಶ್, ಎಂ.ಟಿ. ಹನುಮಂತ ಇತರರಿದ್ದರು. 
ರಾಜ್ಯ

ಸೊಸೈಟಿ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ

ಬೆಟ್ಟದಪುರ:

ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಸಮೀಪದ ಕಣಗಾಲು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಇತ್ತೀಚೆಗೆ ಭೇಟಿ ನೀಡಿದ ಶಾಸಕ ಕೆ.ವೆಂಕಟೇಶ್ ಅವರನ್ನು ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಕೆ.ವೆಂಕಟೇಶ್, ತಾಲೂಕಿನಲ್ಲಿ ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಕಣಗಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಮುಂದೆಯೂ ರೈತರಿಗೆ ಇನ್ನಷ್ಟು ಅನುಕೂಲವಾಗುವ ರೀತಿಯಲ್ಲಿ ಸೇವೆ ಸಲ್ಲಿಸಬೇಕು. ಸಾಲ ಪಡೆದ ರೈತರು ಸಕಾಲದಲ್ಲಿ ಸಾಲ ಮರುಪಾವತಿ ಮಾಡುವ ಮೂಲಕ ಸಹಕಾರ ಸಂಘದಿಂದ ದೊರೆಯುವ ವಿವಿಧ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ತಾಲೂಕು ಆಶ್ರಯ ಮತ್ತು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಲೋಕೇಶ್, ಸಂಘದ ಅಧ್ಯಕ್ಷ ಎಂ.ಟಿ.ಹನುಮಂತ, ಉಪಾಧ್ಯಕ್ಷ ನರಸಯ್ಯ, ನಿರ್ದೇಶಕರಾದ ಡಿ.ಕೆ.ನಟೇಶ್, ಪುಟ್ಟರಾಜೇಗೌಡ, ರೇಖಾ, ಪುಟ್ಟರಾಜು, ಅಣ್ಣೇಗೌಡ, ಸಿಇಒ ಇರ್ಫಾನ್, ಸಿಬ್ಬಂದಿ ಪ್ರಸನ್ನ ಹಾಗೂ ಶ್ವೇತಾ, ಸಂಘದ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.