ಮುಧೋಳದ ಎಸ್.ಆರ್. ಕಂಠಿ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಪರಿಚಯ ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಡಾ. ಎಂ.ಆರ್. ಜರಕುಂಟಿ, ಡಾ. ಲೋಕೇಶ ರಾಠೋಡ, ಪ್ರೊ. ಅಜಯಕುಮಾರ ಕಡೂರ, ಪ್ರೊ. ದುಂಡಪ್ಪ ಇಂಗಳಗಿ ಮತ್ತಿತರರಿದ್ದರು. 
ರಾಜ್ಯ

ಕಾಲೇಜಿನ ಸೌಕರ್ಯಗಳ ಸದ್ಬಳಕೆ ಮಾಡಿಕೊಳ್ಳಿ

ಪ್ರಮುಖ ಮುಖ್ಯಾಂಶಗಳು

  • ಪ್ರಾಚಾರ್ಯ ಡಾ. ಎಂ.ಆರ್. ಜರಕುಂಟಿ ಹೇಳಿಕೆ
  • ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ
ಮುಧೋಳ: ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕಾಲೇಜಿನಲ್ಲಿ ಲಭ್ಯವಿರುವ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಎಸ್.ಆರ್. ಕಂಠಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಂ.ಆರ್. ಜರಕುಂಟಿ ಹೇಳಿದರು.
ನಗರದ ಎಸ್.ಆರ್. ಕಂಠಿ ಮಹಾವಿದ್ಯಾಲಯದ ಒಳಾಂಗಣ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ 2026-27ನೇ ಶೈಕ್ಷಣಿಕ ಸಾಲಿನ ಬಿಎ, ಬಿಕಾಂ, ಬಿಎಸ್ಸಿ ಹಾಗೂ ಬಿಸಿಎ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಮತ್ತು ಪರಿಚಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಹಾವಿದ್ಯಾಲಯದಲ್ಲಿ ಗುಣಮಟ್ಟದ ಬೋಧಕ ವಂದ, ಆಧುನಿಕ ಸೌಲಭ್ಯಗಳು ಹಾಗೂ ವಿದ್ಯಾರ್ಥಿಗಳ ಪ್ರತಿಭೆ ಬೆಳಗಿಸಲು ಅಗತ್ಯವಾದ ಎಲ್ಲ ಅವಕಾಶಗಳಿದ್ದು, ಶಿಸ್ತು, ಸಂಯಮ ಮತ್ತು ನಿರಂತರ ಅಧ್ಯಯನದಿಂದ ಯಶಸ್ಸು ಸಾಧಿಸಬಹುದು ಎಂದು ತಿಳಿಸಿದರು.
ಸಾಂಸ್ಕೃತಿಕ ಹಾಗೂ ಕಲಾ ವಿಭಾಗದ ಮುಖ್ಯಸ್ಥ ಡಾ. ಲೋಕೇಶ ರಾಠೋಡ ಅವರು ಕಲಾ ವಿಭಾಗದಡಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಸೇರಿ ಒಂಬತ್ತು ವಿಷಯಗಳ ವಿಶೇಷತೆ ಹಾಗೂ ವತ್ತಿ ಅವಕಾಶಗಳ ಕುರಿತು ಮಾಹಿತಿ ನೀಡಿದರು.
ಐಕ್ಯೂಎಸಿ ಸಂಯೋಜಕ ಹಾಗೂ ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರೊ. ಅಜಯಕುಮಾರ ಕಡೂರ, ಬಿಸಿಎ ವಿಭಾಗದ ಮುಖ್ಯಸ್ಥ ಪ್ರೊ. ದುಂಡಪ್ಪ ಇಂಗಳಗಿ, ವಿಜ್ಞಾನ ವಿಭಾಗದ ಮುಖ್ಯಸ್ಥೆ ಪ್ರೊ. ವಿಜಯಲಕ್ಷ್ಮೀ ಬಸರಡ್ಡಿ, ಹಿಂದಿ ಉಪನ್ಯಾಸಕಿ ಪ್ರೊ. ವಿದ್ಯಾ ಶಿಂಧೆ, ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ. ಅನೀಲಕುಮಾರ ಮುನ್ನೋಳ್ಳಿ, ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಮತ್ಯುಂಜಯ ಗವಿಮಠ, ಮಹಾಂತೇಶ ಹಿರೇಮಠ ಸೇರಿ ಬೋಧಕ ವಂದ ಉಪಸ್ಥಿತರಿದ್ದರು.