ವಿದ್ಯುತ್​ ಕಂಬ ಬಿದ್ದು ಗಾಯಗೊಂಡಿದ್ದವ ಸಾವು electric pole 
ರಾಜ್ಯ

ವಿದ್ಯುತ್​ ಕಂಬ ಬಿದ್ದು ಗಾಯಗೊಂಡಿದ್ದವ ಸಾವು electric pole

ಪ್ರಮುಖ ಮುಖ್ಯಾಂಶಗಳು

  • ಪರಿಹಾರಕ್ಕೆ ಆಗ್ರಹಿಸಿ ನಗರಸಭೆ ಮುಂದೆ ಪ್ರತಿಭಟನೆ
ಗೌರಿಬಿದನೂರು: ತಿಂಗಳ ಹಿಂದೆ ವಿದ್ಯುತ್​ ಕಂಬ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ. ಸಿಕಂದರ್​ ಖಾನ್​(45)ಮೃತ. electric pole
ನ.2ರಂದು ನಗರದ ಬಿ.ಎಚ್​.ರಸ್ತೆಯ ಎಚ್​ಡಿಎಫ್​ಸಿ ಬ್ಯಾಂಕ್​ ಬಳಿ ಬೈಕ್​ನಲ್ಲಿ ತೆರಳುತ್ತಿದ್ದಾಗ ರಸ್ತೆ ಬದಿಯ ವಿದ್ಯುತ್​ ಕಂಬ ಮೇಲೆ ಬಿದ್ದಿದ್ದರಿಂದ ತಲೆಗೆ ಗಂಭೀರ ಸ್ವರೂಪದ ಗಾಯವಾಗಿತ್ತು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ನಂತರ ತುಮಕೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಸೋಮವಾರ ಮೃತಪಟ್ಟಿದ್ದಾರೆ.
ಕುಟುಂಬಸ್ಥರ ಪ್ರತಿಭಟನೆ: ನಗರಸಭೆ, ಗುತ್ತಿಗೆದಾರರು ಬೀದಿ ದೀಪಗಳನ್ನು ಸೂಕ್ತ ನಿರ್ವಹಣೆ ಮಾಡದಿರುವುದೇ ಟನೆಗೆ ಕಾರಣ. ನಗರಸಭೆಯವರಾಗಲಿ, ಸಮುದಾಯದ ಮಸೀದಿ ಸಮಿತಿ ಸದಸ್ಯರಾಗಲಿ ಕಷ್ಟಕ್ಕೆ ಸ್ಪಂದಿಸಲಿಲ್ಲ. ಕನಿಷ್ಠ ಆಸ್ಪತ್ರೆಗೂ ಭೇಟಿ ನೀಡಲಿಲ್ಲ. ಕುಟುಂಬಕ್ಕೆ ಆಧಾರವಾಗಿದ್ದ ವ್ಯಕ್ತಿಯನ್ನು ಕಳೆದುಕೊಂಡು ಸಂಕಷ್ಟದಲ್ಲಿದ್ದೇವೆ. ಸೂಕ್ತ ಪರಿಹಾರ ದೊರಕಿಸಿಕೊಡಬೇಕು. ದುರ್ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ನಗರಸಭೆ ಮುಂದೆ ಕುಟುಂಬಸ್ಥರು ಪ್ರತಿಭಟನೆ ನಡೆಸಿದರು.
ಮನವಿ ಸ್ವೀಕರಿಸಿದ ಪೌರಾಯುಕ್ತ ರಮೇಶ್​ ಮಾತನಾಡಿ, ಜಿಲ್ಲಾಧಿಕಾರಿ ನೇತೃತ್ವದ ಸಮಿತಿ ಮುಂದೆ ಘಟನೆ ಬಗ್ಗೆ ವರದಿ ಸಲ್ಲಿಸಿ ಸೂಕ್ತ ಪರಿಹಾರ ಒದಗಿಸಲಾಗುವುದು. ಆಶ್ರಯ ಯೋಜನೆಯಡಿ ನಿವೇಶನ ಮಂಜೂರು ಮಾಡಲು ಅಗತ್ಯ ಕ್ರಮ ಜರುಗಿಸಲಾಗುವುದು ಎಂದರು.
ವೃತ್ತ ನಿರೀಕ್ಷಕ ಅಂಜನ್​ ಕುಮಾರ್​ ಮಾತನಾಡಿ, ಈಗಾಗಲೇ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಪರಿಹಾರ ಕುರಿತು ಜಿಲ್ಲಾಧಿಕಾರಿ ನೇತೃತ್ವದ ಸಮಿತಿ ತೀಮಾರ್ನ ತೆಗೆದುಕೊಳ್ಳಲಿದೆ ಎಂಬ ಭರವಸೆ ನೀಡಿದರು. ಈ ಮೇರೆಗೆ ಕುಟುಂಬಸ್ಥರು ಪ್ರತಿಭಟನೆ ವಾಪಸ್​ ಪಡೆದರು.