ಚಾಕು ಇರಿತ 
ರಾಜ್ಯ

ಹಾಡಹಗಲೇ ಚಾಕು ಇರಿತ

ಮಂಜುನಾಥ ಅಂಗಡಿ
ಧಾರವಾಡ: ಕೌಟುಂಬಿಕ ವಿಚಾರದ ಹಿನ್ನೆಲೆಯಲ್ಲಿ ಸಂಬಂಧಿಕರ ಮಧ್ಯೆ ಜಗಳ ನಡೆದು ಓರ್ವನಿಗೆ ಚಾಕುವಿನಿಂದ ಇರಿದ ಟನೆ ನಗರದ ಮಾರುಕಟ್ಟೆ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಸೂಫಿಯಾನ್​ ಎಂಬಾತ ತನ್ನ ಸಂಬಂಧಿ ಮೊಹ್ಮದ್​ನದೀಂ ಮೇಲೆ ಚಾಕುವಿನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ.
ಕೌಟುಂಬಿಕ ವಿಚಾರವಾಗಿ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಮಾತು ವಿಕೋಪಕ್ಕೆ ಹೋಗಿದ್ದು, ಈ ವೇಳೆ ಸಿಟ್ಟಿಗೆದ್ದ ಸೂಫಿಯಾನ್​ ಏಕಾಏಕಿ ನದೀಂಗೆ ಚಾಕುವಿನಿಂದ ಇರಿದಿದ್ದಾನೆ. ಮೊಹ್ಮದ್​ನದೀಂ ಕತ್ತಿಗೆ ಗಾಯವಾಗಿದ್ದು, ತೀವ್ರ ರಕ್ತಸ್ರಾವವಾಗಿದೆ. ಪೊಲೀಸರು ಸ್ಥಳಿಯರ ನೆರವಿನಿಂದ ಗಾಯಾಳುವನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಿದರು. ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕೆಎಂಸಿಆರ್​ಐ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಕುರಿತು ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾಗಿರುವ ಆರೋಪಿ ಸೂಫಿಯಾನ್​ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.