ವಡಗೇರಾ ಪಟ್ಟಣದ ಅದಿದೇವತೆ ಮಾರಿಕಾಂಬೆ ದೇವಿ ಜಾತ್ರಾ ಮಹೋತ್ಸವದ ನಿಮಿತ್ತ ಗುರುವಾರ ಸಾವಿರಾರು ಭಕ್ತರ ಮಧ್ಯೆ ಅದ್ದೂರಿಯಾಗಿ ರಥೋತ್ಸವ ನಡೆಯಿತು. 
ರಾಜ್ಯ

ಮಾರಿಕಾಂಬೆ ದೇವಿ ರಥೋತ್ಸವ ಅದ್ದೂರಿ

ವಡಗೇರಾ: ಪಟ್ಟಣದ ಅಧಿದೇವತೆ ಮಾರಿಕಾಂಬೆ ದೇವಿ ಜಾತ್ರಾ ಮಹೋತ್ಸವದ ನಿಮಿತ್ತ ಗುರುವಾರ ಸಾವಿರಾರು ಭಕ್ತರ ಮಧ್ಯೆ ಅದ್ದೂರಿಯಾಗಿ ರಥೋತ್ಸವ ಜರುಗಿತು.
ಕಳೆದ ಎಂಟು ದಿನಗಳಿಂದ ಜಾತ್ರೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳುತ್ತಾ ದೇವಸ್ಥಾನಕ್ಕೆ ಬಣ್ಣ ಹಚ್ಚಿ ಮಾರಿಕಾಂಬೆ ದೇವಿಯ ಮೂರ್ತಿಯನ್ನು ಗಂಗಾ ಸ್ನಾನಕ್ಕೆ ತೆಗೆದುಕೊಂಡು ಹೋಗಲಾಯಿತು.
ನಂತರ ಗಂಗೆಗೆ ವಿಶೇಷ ಪೂಜೆ ಸಲ್ಲಿಸಿ ಮೂರ್ತಿಗೆ ಹಲವಾರು ಪೂಜಾ ಕೈಂಕರ್ಯಗಳನ್ನು ನೆರವೇರಿಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಯಿತು. ನಂತರ ದೇವಸ್ಥಾನಕ್ಕೆ ತಂದು ದೇವಸ್ಥಾನದ ಮುಂಬಾಗದಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡಿ ಭಕ್ತರ ದರ್ಶನಕ್ಕೆ ಅನುಕೂಲ ಮಾಡಿಕೊಡಲಾಯಿತು. ಗುರುವಾರ ಬೆಳಿಗ್ಗೆಯಿಂದಲೇ ದೇವಸ್ಥಾನದಲ್ಲಿ ಪೂಜೆ ಹಾಗೂ ಹಲವಾರು ಧಾರ್ಮಿಕ ಕಾರ್ಯಕ್ರಮಗಳು ನೆರವೇರಿಸಿ ಸಂಜೆ 7&30ಕ್ಕೆ ಭವ್ಯ ರಥೋತ್ಸವವು ಜರುಗಿತು.
ರಥೋತ್ಸವದಲ್ಲಿ ಪಟ್ಟಣ ಸೇರಿ ವಿವಿಧ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು.