ರಾಜ್ಯ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) -2026 ಕುರಿತು ಬೃಹತ ಜಾಗೃತಿ ಜಾಥಾ

ಕಲಬುರಗಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) - 2026ರ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಈ ಜಾಗೃತಿ ಜಾಥಾವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಸಂಕನೂರ ಅವರು ಹೇಳಿದರು.
ಸೋಮವಾರ ನಗರದ ಜಗತ್ ವೃತ್ತದಲ್ಲಿವ ಭಾರತ ಚುನಾವಣಾ ಆಯೋಗ, ಮುಖ್ಯ ಚುನಾವಣಾಧಿಕಾರಿಗಳು ಕರ್ನಾಟಕ, ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ (SVEEP) ಸಮಿತಿ ಕಲಬುರಗಿ ಇವರ ಸಂಯಕ್ತಾಶ್ರಯದಲ್ಲಿ ಆಯೋಜಿಸಿದ ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 ರ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, 2026ರ ಜೂನ್ 30ರಿಂದ ಜುಲೈ 30ರವರೆಗೆ ನಡೆಯಲಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣಾ ಕಾರ್ಯಕ್ರಮದ ಬಗ್ಗೆ ಜನಸಾಮಾನ್ಯರಿಗೆ ಅರಿವು ಮೂಡಿಸುವುದು ಮತ್ತು ಅರ್ಹರಾದ ಪ್ರತಿಯೊಬ್ಬ ವ್ಯಕ್ತಿಯ ಹೆಸರು ಮತದಾರರ ಪಟ್ಟಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.
ಮಾನ್ಯ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ ಹಾಗೂ ಅಧ್ಯಕ್ಷರು ಜಿಲ್ಲಾ ಸ್ವೀಪ್ ಸಮಿತಿ ಕಲಬುರಗಿ ರವರು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ, (S.I.R) ದಿನಾಂಕ: 30-06-2026 ರಿಂದ 29-07-2026 ರವರೆಗೆ ಮತಗಟ್ಟೆ ಮಟ್ಟದ ಅಧಿಕಾರಿ (BLOs) ಗಳಿಂದ ಮನೆ ಮನೆ ಭೇಟಿ ನೀಡಿ Enumeration Form & Declaration Form, (ಗಣತಿದಾರರ ನಮೂನೆಯನ್ನು ದ್ವಿಪ್ರತಿಯಲ್ಲಿ ನೀಡಲು ತಿಳಿಸಿದರು. ಹಾಗೂ ದೋಷರಹಿತ ಮತದಾರರ ಪಟ್ಟಿಗಳು ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ, ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಮಾತನಾಡಿದರು
ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ತಪ್ಪು ಮಾಹಿತಿಗಳ ಬಗ್ಗೆ ಎಚ್ಚರಿಕೆ ಅಗತ್ಯ. ಈ ಪ್ರಕ್ರಿಯೆಯಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗವಹಿಸಿ, ತಮ್ಮ ಹೆಸರುಗಳನ್ನು ಪಟ್ಟಿಯಲ್ಲಿ ಸೇರಿಸಿಕೊಳ್ಳಲು ಹಾಗೂ ಅಗತ್ಯವಿದ್ದಲ್ಲಿ ತಿದ್ದುಪಡಿ ಮಾಡಿಕೊಳ್ಳಲು ತಿಳಿಸಿದರು.
ವಿಶೇಷ ಸಮಗ್ರ ಪರಿಷ್ಕರಣೆ,SPECIAL INTENSIVE REVISION (S.I.R) ಕುರಿತು ಕಲಬುರಗಿ ಜಿಲ್ಲೆಯಲ್ಲಿಮತದಾರರ ಪಟ್ಟಿಯ ಕುರಿತು ಜಿಲ್ಲಾಡಳಿತ ಹಾಗೂ ಜಿಲ್ಲಾಟ ಸ್ವೀಪ್ ಸಮಿತಿ,ಹಾಗೂ ಪ್ರಾದೇಶಿಕ ಜಂಟಿ ನಿರ್ದೇಶಕರು ಕಾಲೇಜು ಶೀಕ್ಷಣ ಇಲಾಖೆ, ಉಪ ನಿರ್ದೇಶಕರು ಪದವಿ ಪೂರ್ವ ಶಿಕ್ಷಣ ಇಲಾಖೆ, ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕ ಪಂಚಾಯತ ಕಲಬುರಗಿ ಇವರ ಸಹಯೋಗದೊಂದಿಗೆ ಜಿಲ್ಲೆಯ ಜನರಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(S.I.R), ಕುರಿತು ಅರಿವು ಮೂಡಿಸಲು ಜಗತ್ ವೃತ್ತದಿಂದ ಅನ್ನಪೂರ್ಣ ಕ್ರಾಸ, ಲಾಹೋಟಿ ಪೇಟ್ರೋಲ್ ಬಂಕ ದಿಂದ ಜಿಲ್ಲಾಧಿಕಾರಿಯವರ ಕಛೇರಿ ವರೆಗೆ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಯಿತು. ದೇಶದಲ್ಲಿ ಇದು ಮೂರನೇ ಹಂತದ ಮತದಾರರ ಪರಿಷ್ಕರಣೆಯಾಗಿದ್ದು, ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಅದರ ಕುರಿತಾದ ಜಾಗೃತಿ ಅಭಿಯಾನದ ಕುರಿತು ವಿದ್ಯಾರ್ಥಿಗಳು ತಮ್ಮ ಕೈಯಲ್ಲಿ ಜಾಗೃತಿ ಫಲಕಗಳನ್ನು ಹಿಡಿದು ಪ್ರದರ್ಶಿಸಿ ಘೋಷಣೆಗಳನ್ನು ಕೂಗಿದರು.
ಈ ಜಾಗೃತಿ ಅಭಿಯಾನದಲ್ಲಿ ಸ್ವೀಪ್ ನೋಡಲ್ ಅಧ್ಯಕ್ಷರು, ಜಿ.ಪಂ. ಯೋಜನಾ ನಿರ್ದೇಶಕ ಜಗದೇವಪ್ಪ, ಪ್ರಾದೇಶಿಕ ಜಂಟಿ ನಿರ್ದೇಶಕರು ಕಾಲೇಜು ಶಿಕ್ಷಣ ಇಲಾಖೆಯೊ ಕಛೇರಿಯ ಅಧಿಕಾರಿ ಸೂರ್ಯಕಾಂತ ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸುರೇಶ ಅಕ್ಕಣ್ಣ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಚೆನ್ನಪ್ಪ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಾನಪ್ಪ ಕಟ್ಟಿಮನಿ, ಎಸ್‍ಎಚ್‍ಜಿ ಮಹಿಳೆಯರು, ಎನ್.ಎಸ್.ಎಸ್ ಸ್ವಯಂಸೇವಕರು, ಬಿ.ಎಲ್.ಒ.ಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಕಾಲೇಜು ವಿದ್ಯಾರ್ಥಿಗಳು, ಪಾಲ್ಗೊಂಡಿದ್ದರು.