Massive public awareness rally on the 3rd
pvd ಪಾವಗಡ: ಉದ್ಯೋಗ ಖಾತ್ರಿ ಯೋಜನೆ ತಿದ್ದುಪಡಿ ವಿರೋಧಿಸಿ ಹಾಗೂ ದೇಶದ ಪ್ರಥಮ ಮಹಿಳಾ ಶಿಕ್ಷಕಿ ಸಾವಿತ್ರಿ ಬಾಯಿ ಫುಲೆ ಜನ್ಮದಿನಾಚರಣೆ ಪ್ರಯುಕ್ತ ತಮಟೆ ಗ್ರಾಮೀಣ ಕೂಲಿ ಕಾರ್ಮಿಕ ಸಂದಿಂದ ಜ.3ರಂದು ತಾಲೂಕು ಮಟ್ಟದ ಬೃಹತ್ ಜನ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ತಮಟೆ ಸಂಘಟನೆಯ ಸಂಸ್ಥಾಪಕ ಕಾರ್ಯದರ್ಶಿ ಡಾ.ಕೆ.ಬಿ.ಓಬಳೇಶ ತಿಳಿಸಿದರು.
ಪಟ್ಟಣದ ನಿರೀಕ್ಷಣ ಮಂದಿರದಲ್ಲಿ ಗುರುವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೂಲಿ ಕಾರ್ಮಿಕರಿಗೆ ಅನುಕೂಲಕರವಾಗಿದ್ದ, ಗಡಿಭಾಗದ ತಾಲೂಕುಗಳಿಗೆ ವರದಾನವಾಗಿದ್ದ ಉದ್ಯೋಗ ಖಾತ್ರಿ ಯೋಜನೆಯನ್ನು ಕೇಂದ್ರ ಸರ್ಕಾರವು ತಿದ್ದುಪಡಿ ಮಾಡಿರುವುದನ್ನು ವಿರೋಧಿಸಿ ಈ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ದೇಶದಲ್ಲಿ ಪ್ರಥಮ ಬಾರಿಗೆ ಹೆಣ್ಣು ಮಕ್ಕಳಿಗೆ ಶಾಲೆ ತೆರೆದ ಸಾವಿತ್ರಿ ಬಾಯಿಫುಲೆ ಅವರ ಜನ್ಮ ದಿನಾಚರಣೆ ಪ್ರಯುಕ್ತ ಚರಿತ್ರೆ ಅರಿವು ಜನ ಜಾಗೃತಿ ಸಮಾವೇಶ ನಡೆಸಲು ಉದ್ದೇಶಿಸಲಾಗಿದ್ದು, ಶನಿವಾರ ಪಟ್ಟಣದ ಹಳೇ ಬಸ್ ನಿಲ್ದಾಣದಿಂದ ಗುರುಭವನದ ವರೆಗೆ ಜಾಗೃತಿ ಮೆರವಣಿಗೆ ನಡೆಸಲಾಗುವುದು ಎಂದು ತಿಳಿಸಿದರು.