ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಲಿ beneficiaries
ಬಂಗಾರಪೇಟೆ: ಗೃಹಲಕ್ಷಿ$್ಮ ಮತ್ತು ಗೃಹಜ್ಯೋತಿ ಯೋಜನೆಗಳ ಸಮಗ್ರ ಪರಿಷ್ಕರಣೆ ನಡೆಸಿ, ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆಗಳ ಸೌಲಭ್ಯ ತಲುಪುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ಸಮಿತಿಯ ತಾಲೂಕು ಅಧ್ಯಕ್ಷ ಪಾರ್ಥಸಾರಥಿ ತಿಳಿಸಿದರು.beneficiaries
ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ತಾಲೂಕುಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಬಡವರ ಅಭಿವೃದ್ಧಿಗಾಗಿ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಅರ್ಹರಿಗೆ ತಲುಪಿಸುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸಮರ್ಪಕವಾಗಿ ಕೆಲಸ ಮಾಡಬೇಕು ಎಂದು ಸೂಚಿಸಿದರು.
ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ, ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ದಾರರಿಗೆ ನಿಯಮಾನುಸಾರ ಆಹಾರಧಾನ್ಯ ವಿತರಣೆ ನಡೆಯುತ್ತಿದೆ. ಗೃಹಲಕ್ಷ್ಮಿ ಯೋಜನೆಯಡಿ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಪ್ರತಿ ತಿಂಗಳು 2,000 ರೂ. ಜಮಾ ಮಾಡಲಾಗುತ್ತಿದೆ ಎಂದು ಹೇಳಿದರು.
ತಾಲೂಕು ಮಾರ್ಗಗಳಲ್ಲಿ ಸಂಚರಿಸುವ ಬಸ್ಗಳು ನಿಗದಿತ ಸಮಯಕ್ಕೆ ಸರಿಯಾಗಿ ಸಂಚಾರ ಮಾಡಬೇಕು. ಒಂದೇ ಸಮಯದಲ್ಲಿ ಎರಡು ಬಸ್ಗಳು ಬರುವಂತಹ ಸಮಸ್ಯೆ ಸರಿಪಡಿಸಲಾಗಿದೆ ಎಂದರು.