ಹುಲಸೂರಿನ ಗುರು ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ತಾಲೂಕು ಆಡಳಿತದಿಂದ ಶನಿವಾರ ಆಯೋಜಿಸಿದ್ದ 80ನೇ ಸ್ವಾತಂತ್ರೊ$್ಯತ್ಸವದಲ್ಲಿ ವಿವಿಧ ಸಾಧಕರನ್ನು ಸನ್ಮಾನಿಸಲಾಯಿತು. ಗ್ರಾಪಂ ಅಧ್ಯಕ್ಷೆ ದೀಪಾರಾಣಿ ಭೊಸ್ಲೆ, ಉಪಾಧ್ಯಕ್ಷೆ ಮೀರಾಬಾಯಿ ಗಾಯಕವಾಡ, ತಹಸೀಲ್ದಾರ್​ ಶಿವಾನಂದ ಮೇತ್ರೆ, ತಾಪಂ ಇಒ ಮಹಾದೇವ ಜಮ್ಮು, ಸುಧೀರ ಕಾಡಾದಿ, ಶಂಕರಗೌಡ ಇತರರಿದ್ದರು. 16ಹುಲಸೂರು2/ಹುಲಸೂರುತಹಸಿಲ್​ ಕಾರ್ಯಲಯದ ಆವರಣದಲ್ಲಿ ಶನಿವಾರ 80ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ತಹಸೀಲ್ದಾರ್​ ಶಿವಾನಂದ ಮೇತ್ರೆ ಮಹಾತ್ಮರ ಭಾವಚಿತ್ರಕ್ಕೆ ಪೂಜಿ ಸಲ್ಲಿಸಿ ಧ್ವಜರೋಹಣ ನೆರವೇರಿಸಿದರು. ಶಾಸಕ ಶರಣು ಸಲಗರ ಪ್ರಮುಖರಾದ ಲತಾ ಹಾರಕೂಡೆ, ಸುಧೀರ ಕಾಡಾದಿ, ಜಬ್ಬಾರ್​ ಸೌದಾಗರ್​, ಕಾಶೀನಾಥ ಕಲಾಲ್​ ಇತರರಿದ್ದರು. 
ರಾಜ್ಯ

ದೇಶಕ್ಕಾಗಿ ಶ್ರಮಿಸುವ ಗುಣ ಬೆಳೆಸಿಕೊಳ್ಳಲಿ

ಪ್ರಮುಖ ಮುಖ್ಯಾಂಶಗಳು

  • ತಹಸೀಲ್ದಾರ್​ ಶಿವಾನಂದ ಮೇತ್ರೆ ಸಲಹೆ
  • ಹುಲಸೂರಿನಲ್ಲಿ ಸ್ವಾತಂತ್ರ್ಯ ದಿನಾಚರಣೆ
ಹುಲಸೂರು: ಅನೇಕ ಮಹನೀಯರ ತ್ಯಾಗ ಮತ್ತು ಬಲಿದಾನದಿಂದ ನಮಗೆ ಸ್ವಾತಂತ್ರ್ಯ ದೊರೆತಿದ್ದು, ಇಂದಿನ ಯುವಕರು ದೇಶ ಸೇವೆಗೆ ಅಣಿಯಾಗುವ ಪ್ರಾಮಾಣಿಕ ಕೆಲಸ ಮಾಡಬೇಕಿದೆ ಎಂದು ತಹಸೀಲ್ದಾರ್​ ಶಿವಾನಂದ ಮೇತ್ರೆ ಹೇಳಿದರು.
ಪಟ್ಟಣದ ಗುರು ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ತಾಲೂಕು ಆಡಳಿತದಿಂದ ಶನಿವಾರ ಆಯೋಜಿಸಿದ್ದ 80ನೇಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಿ, ಭಾರತ ಪುಣ್ಯಭೂಮಿಯಾಗಿದೆ. ಇಲ್ಲಿ ಸಂತರು, ಶರಣರು ನಡೆದಾಡಿದ್ದಾರೆ. ಮಹಾತ್ಮ ಗಾಂಧೀಜಿ ನೇತೃತ್ವದಲ್ಲಿ ಅನೇಕ ಹೋರಾಟಗಾರರು ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ನ್ಯಾಯ ಒದಗಿಸುವ ಕಾರ್ಯ ಮಾಡಿದ್ದಾರೆ ಎಂದರು.
ನೀಲಗಂಗಾ ಶಿಕ್ಷಣ ಸಂಸ್ಥೆ ಹಾಗೂ ನವ ಕಲ್ಯಾಣ ಕರ್ನಾಟಕ ಮಹಾಸಭಾ ಕಾರ್ಯದರ್ಶಿ ಶಂಕರಗೌಡ, ಗ್ರಾಪಂ ಅಧ್ಯಕ್ಷೆ ದೀಪಾರಾಣಿ ಭೋಸ್ಲೆ , ಜಿಪಂ ಮಾಜಿ ಸದಸ್ಯ ಸುಧೀರ ಕಾಡಾದಿ ಮಾತನಾಡಿದರು.
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಉಪಾಧ್ಯಕ್ಷೆ ಲತಾ ಹಾರಕೂಡೆ, ತಾಪಂ ಇಒ ಮಹಾದೇವ ಜಮ್ಮು, ಉಪ ತಹಸೀಲ್ದಾರ್​ ಸುನೀಲ ಸಜ್ಜನಶೆಟ್ಟಿ, ಕಂದಾಯ ನಿರೀಕ್ಷಕ ಶರಣಪ್ಪ ಪಾಡಶೆಟ್ಟಿ, ಶಿಕ್ಷಣ ಸಂಯೋಜಕ ಶಿವರಾಜ ಕನಕಟ್ಟೆ ಇದ್ದರು. ಮಲ್ಲಿಕಾರ್ಜುನ ಬೆನಕೆರೆ ಸ್ವಾಗತಿಸಿ ನಿರೂಪಣೆ ಮಾಡಿದರು. ನಂತರ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ನಡೆದ ಸಾಂಸತಿಕ ಕಾರ್ಯಕ್ರಮ ನೋಡುಗರ ಗಮನ ಸೆಳೆದವು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.