ಕಲಬುರಗಿ : ಕರ್ನಾಟಕ ಕೇಂದ್ರಿಯ ವಿದ್ಯಾಲಯದ 10 ನೇ ಘಟಿಕೋತ್ಸವಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಉಪರಾಷ್ಟ್ರಪತಿ ರಾಧಾಕೃಷ್ಣ ಅವರನ್ನು ಇಂದು ಕಲಬುರಗಿ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಪುರ ಅವರು ಬೀಳ್ಕೊಡುಗೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಕಲಬುರಗಿ ನಗರ ಪೊಲೀಸ್ ಆಯುಕ್ತರಾದ ಶರಣಪ್ಪ ಎಸ್ ಡಿ, ನಗರ ಪಾಲಿಕೆ ಆಯುಕ್ತರಾದ ಅವಿನಾಶ್ ಶಿಂದೆ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.