ಸುದ್ದಿಗೋಷ್ಠಿಯಲ್ಲಿ ಮಹಾದೇವ ತಳವಾರ, ಬಾಹುಸಾಬ ಪಾಂಡರೆ, ವಿಕ್ರಂ ಕರನಿಂಗ, ಸಂಜೀವ ಕಾಂಬಳೆ, ಶಾನುರ ತಹಸೀಲ್ದಾರ್, ಕೆಂಪ್ಪಣ್ಣ ಶಿರಹಟ್ಟಿ ಇತರರಿದ್ದರು. 
ರಾಜ್ಯ

ಸಚಿವ ಸತೀಶ ಜಾರಕಿಹೊಳಿ ಅವಹೇಳನ ಸಲ್ಲ

ಬೆಳಗಾವಿ: ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಜಾತ್ಯತೀತ ನಾಯಕನಾಗಿ ರಾಷ್ಟ್ರ ಮಟ್ಟದಲ್ಲಿ ಬೆಳೆದಿರುವ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ತುಳಿಯುವ, ಅವಹೇಳನಕಾರಿ ಕೃತ್ಯ ಸಹಿಸುವುದಿಲ್ಲ ಎಂದು ದಲಿತ, ಲಿಂಗಾಯತ, ಅಹಿಂದ ವರ್ಗದ ಮುಖಂಡರು ಎಚ್ಚರಿಸಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಲ್ಲೇಶ ಚೌಗುಲೆ, ಮಹಾವೀರ ಮೋಹಿತೆ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕಿ ಸುನೀತಾ ಐಹೊಳೆ ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಸತೀಶ ಜಾರಕಿಹೊಳಿ ವಿರುದ್ಧ ಅವಹೇಳಕಾರಿ ಪೋಸ್ಟ್‌ಗಳನ್ನು ಹಾಕಿರುವ ಅಂಬೇಡ್ಕರ್ ಜನಜಾಗೃತಿ ವೇದಿಕೆ ಜಿಲ್ಲಾ ಗೌರವಾಧ್ಯಕ್ಷ ಮಲ್ಲಿಕಾರ್ಜುನ ರಾಸಿಂಗೆ ಅವರನ್ನು ತಕ್ಷಣ ಸಂಘಟನೆ ಹಾಗೂ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಬೇಕು ಎಂದು ಆಗ್ರಹಿಸಿದರು.
ಸಚಿವ ಸತೀಶ ಜಾರಕಿಹೊಳಿ ಕೇವಲ ದಲಿತ ಸಮುದಾಯಕ್ಕೆ ಸೀಮಿತವಲ್ಲ. ಎಲ್ಲ ವರ್ಗದ ನಾಯಕರಾಗಿ ಬೆಳೆದಿದ್ದಾರೆ. ಪ್ರಮುಖವಾಗಿ ದಲಿತ ಸಮುದಾಯ ಬಗ್ಗೆ ಅಪಾರ ಕಾಳಜಿ ಹೊಂದಿರುವ ವ್ಯಕ್ತಿಯನ್ನು ತೇಜೋವಧೆ ಮಾಡಲು ಪ್ರಯತ್ನಿಸಿದರೆ ಸುಮ್ಮನಿರುವುದಿಲ್ಲ ಎಂದರು.
ರಾಸಿಂಗೆ ಹೇಳಿಕೆ ಹಿಂದೆ ಯಾರ ಕೈವಾಡವಿದೆ ಎಂದು ಗೊತ್ತಿದೆ. ಜಾರಕಿಹೊಳಿ ಕುಟುಂಬ ತುಳಿಯಲು ಯಾರಿಂದಲೂ ಸಾಧ್ಯವಿಲ್ಲ. ಇಂತಹ ಕೃತ್ಯಗಳನ್ನು ಇಲ್ಲಿಗೆ ನಿಲ್ಲಿಸಿದರೆ ಒಳಿತು. ಇಲ್ಲದಿದ್ದರೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದಿದ್ದಾರೆ.