ತ್ಯಾಜ್ಯದಿಂದ ಸ್ವಾತಂತ್ರ್ಯ ಅಭಿಯಾನಕ್ಕೆ ಮಹದೇವಪುರ ಕ್ಷೇತ್ರದ ಚಿನ್ನಪ್ಪನಹಳ್ಳಿ ಬಳಿ ಶಾಸಕಿ ಮಂಜುಳಾ ಲಿಂಬಾವಳಿ ಅಭಿಯಾನಕ್ಕೆ ಚಾಲನೆ ನೀಡಿದರು.  
ರಾಜ್ಯ

ತ್ಯಾಜ್ಯದಿಂದ ಸ್ವಾತಂತ್ರ್ಯ ಅಭಿಯಾನಕ್ಕೆ ಶಾಸಕಿ ಮಂಜುಳಾ ಲಿಂಬಾಬಳಿ ಚಾಲನೆ.

ತ್ಯಾಜ್ಯದಿಂದ ಸ್ವಾತಂತ್ರ್ಯ ಅಭಿಯಾನಕ್ಕೆ ಶಾಸಕಿ ಮಂಜುಳಾ ಲಿಂಬಾಬಳಿ ಚಾಲನೆ.

ಕ್ಕೆ

ಸರಕಾರಿ ಜಾಗಗಳಲ್ಲಿ ಕಸ ಹಾಕಿ ಮಲಿನ ಮಾಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ವಿಶೇಷ ಅಭಿಯಾನವನ್ನು ಆರಂಭಿಸಿದ್ದು, ಖಾಸಗಿ ಜಾಗಗಳಲ್ಲಿ ಸ್ವಚ್ಛತೆಯ ಜವಾಬ್ದಾರಿ ಜಾಗದ ಮಾಲಕರದ್ದೇ ಆಗಿರಲಿದೆ. ಒಂದು ವೇಳೆ ಆಗಸ್ಟ್ 15ರ ಒಳಗೆ ಸ್ವಚ್ಛತೆ ಆಗಿಲ್ಲ ಎಂದಾದರೆ ಸ್ವಚ್ಛತಾ ಕಾರ್ಯವನ್ನು ಸರಕಾರವೇ ಮಾಡಲಿದೆ ಮತ್ತು ಅದರ ವೆಚ್ಚವನ್ನು ಜಾಗದ ಮಾಲಿಕರು ಪಾವತಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಸ್ವಚ್ಛ ಬೆಂಗಳೂರು ನಿರ್ಮಾಣಕ್ಕಾಗಿ ನಾವೆಲ್ಲರೂ ಜೊತೆಯಾಗಿ ಮುನ್ನಡೆಯೋಣ ಎಂದು ಸಲಹೆ ನೀಡಿದರು.
ಬೆಂಗಳೂರು ಪೂರ್ವ ನಗರ ಪಾಲಿಕೆ ಆಯುಕ್ತ ಡಿ.ಎಸ್. ರಮೇಶ್ ಮಾತನಾಡಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರ ನಿರ್ದೇಶನದಂತೆ ಸ್ವಚ್ಛ, ಸುಂದರ, ಆರೋಗ್ಯಕರ ಹಾಗೂ ತ್ಯಾಜ್ಯ ಮುಕ್ತ ನಗರ ನಿರ್ಮಾಣದ ಗುರಿಯೊಂದಿಗೆ ಬೆಂಗಳೂರು ಪೂರ್ವ ನಗರ ಪಾಲಿಕೆ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ ಹಾಗೂ ವಿವಿಧ ಅಂಗ ಸಂಸ್ಥೆಗಳ ಸಹಯೋಗದಲ್ಲಿ ಮಹದೇವಪುರ ಕ್ಷೇತ್ರದ ಚಿನ್ನಪ್ಪನಹಳ್ಳಿಯ ರೈಲ್ವೆ ಸಮಾನಂತರ ರಸ್ತೆ ಬಳಿ ಹಾಗೂ ಕೆ.ಆರ್. ಪುರ ಕ್ಷೇತ್ರದ ಐಟಿಐ ಗೇಟ್ ಬಳಿ ತ್ಯಾಜ್ಯದಿಂದ ಸ್ವಾತಂತ್ರ್ಯ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.
ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಗಸ್ಟ್ ತಿಂಗಳಲ್ಲಿ ನಡೆಯಲಿರುವ ಈ ಅಭಿಯಾನದ ಮೂಲಕ ಸಾರ್ವಜನಿಕ ರಸ್ತೆಗಳು, ಪಾದಚಾರಿ ಮಾರ್ಗಗಳು, ರಾಜಕಾಲುವೆಗಳ ಬದಿಗಳು, ಖಾಲಿ ನಿವೇಶನಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ಸುರಿಯಲಾಗಿರುವ ಕಟ್ಟಡ ನಿರ್ಮಾಣ ತ್ಯಾಜ್ಯ, ಮರದ ಕೊಂಬೆಗಳು ಹಾಗೂ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಯಾಗಿರುವ ಇತರೆ ತ್ಯಾಜ್ಯಗಳನ್ನು ಸಂಪೂರ್ಣವಾಗಿ ತೆರವುಗೊಳಿಸಿ ಪರಿಸರ ಸ್ನೇಹಿ, ಸುರಕ್ಷಿತ ಹಾಗೂ ಸ್ವಚ್ಛ ನಗರ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ ಎಂದರು.
ನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆಸಿದ ಸಮೀಕ್ಷೆಯಲ್ಲಿ 236 ಸಾರ್ವಜನಿಕ ಸ್ಥಳಗಳಲ್ಲಿ ಸುಮಾರು 12,000 ಮೆಟ್ರಿಕ್ ಟನ್ ಕಟ್ಟಡ ನಿರ್ಮಾಣ ಮತ್ತು ಇನರ್ಟ ತ್ಯಾಜ್ಯವನ್ನು ಗುರುತಿಸಲಾಗಿದೆ. ವಾರ್ಡ್ ಮಟ್ಟದಲ್ಲಿ ಇನ್ನೂ ಹೆಚ್ಚಿನ ತ್ಯಾಜ್ಯ ಸಂಗ್ರಹಣ ಸ್ಥಳಗಳ ಮಾಹಿತಿಯನ್ನು ಕಲೆ ಹಾಕಲಾಗುತ್ತಿದ್ದು, ಅವುಗಳನ್ನೂ ಸಹಾ ಹಂತ ಹಂತವಾಗಿ ತೆರವುಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು.ಅಪರ ಆಯುಕ್ತರಾದ (ಅಭಿವೃದ್ಧಿ) ಲೋಖಂಡೆ ಸ್ನೇಹಲ್ ಸುಧಾಕರ್, ಮಹದೇವಪುರ ಕ್ಷೇತ್ರ ಬಿಜೆಪಿ ನಗರ ಮಂಡಲ ಅಧ್ಯಕ್ಷ ಎನ್.ಆರ್.ಶ್ರೀಧರ್ ರೆಡ್ಡಿ ಇದ್ದರು.