MLA Yashwant Rayagouda Patil withdrew his resignation
- ಸಚಿವ ಸ್ಥಾನ ಸಿಗದೆ ರಾಜೀನಾಮೆ ನೀಡುವ ನಿರ್ಧಾರ ಕೈಗೊಂಡಿದ್ದ ಶಾಸಕ ಯಶವಂತರಾಯಗೌಡ ಪಾಟೀಲ್
- ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್
- ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು 15 ನಿಮಿಷಗಳ ಕಾಲ ಯಶವಂತರಾಯಗೌಡ ಪಾಟೀಲ್ ಅವರ ಬಳಿ ಮಾತನಾಡಿದ್ದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ
- ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಶಾಸಕ ಪಾಟೀಲ್
ಬೆಂಗಳೂರು: ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ರಾಜೀನಾಮೆ ನೀಡುವ ನಿರ್ಧಾರ ಕೈಗೊಂಡಿದ್ದ ಶಾಸಕ ಯಶವಂತರಾಯಗೌಡ ಪಾಟೀಲ್
ಇದೀಗ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.
ರಾಜೀನಾಮೆ ವಾಪಸ್ ಪಡೆದು ಕೊಂಡಿರುವ ಬಗ್ಗೆ ಸಭಾಧ್ಯಕ್ಷರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಸಂಪುಟ ವಿಸ್ತರಣೆ ಬಿಕ್ಕಟ್ಟು
ಕಾಂಗ್ರೆಸ್ ಸಂಪುಟ ವಿಸ್ತರಣೆಯಿಂದಾಗಿ ಕರ್ನಾಟಕ ಸರ್ಕಾರದ ರಾಜಕೀಯದಲ್ಲಿ ತಲ್ಲಣ್ಣ ಸೃಷ್ಟಿಯಾಗಿದೆ. ಶಾಸಕರ ಅಸಮಾಧಾನ ಮುಂದುವರೆದಿದೆ. ದಿನೇಶ್ ಗುಂಡುರಾವ್, ಎಂಸಿ ಸುಧಾಕರ್, ಭೇಳೂರು ಗೋಪಾಲ ಕೃಷ್ಣ ಅವರು ನೇರವಾಗಿಯೇ ಸಿಎಂ ಡಿಕೆ ಶಿವಕುಮಾರ್ ಹಾಗೂ ಹೈಕಮಾಂಡ್ ವಿರುದ್ಧ ಕಿಡಿಕಾರಿದ್ದಾರೆ. ಸದ್ಯ ಕೆಪಿಸಿಸಿ ಅಧ್ಯಕ್ಷರು ಹಾಗೂ ಸಿಎಂ ಡಿಕೆ ಶಿವಕುಮಾರ್ ಹಾಗೂ ಹೈಕಮಾಂಡ್ ನೊಂದವರ ಮನ ತಣಿಸುವ ಕೆಲಸವನ್ನು ಮಾಡುತ್ತಿದೆ ಎನ್ನಲಾಗಿದೆ.
ಪತ್ರದಲ್ಲಿ ಏನಿದೆ?
ಮನವಿ ಪತ್ರದಲ್ಲಿ ತಿಳಿಸಿದ್ದಾರೆ
ಯಶವಂತರಾಯಗೌಡ ಪಾಟೀಲ್ ಅವರಿಗೆ ಕರೆ ಮಾಡಿ ಸುಮಾರು 15 ನಿಮಿಷಗಳ ಕಾಲ ಸಿಎಂ ಡಿಕೆ ಶಿವಕುಮಾರ್ ಅವರು ಮಾತನಾಡಿದ ಬಳಿಕ
ಯಶವಂತರಾಯಗೌಡ ಪಾಟೀಲ್ ಅವರು ರಾಜೀನಾಮೆ ನಿರ್ಧಾರವನ್ನು ವಾಪಸ್ ಪಡೆದಿದ್ದಾರೆ.
ಈ ಕುರಿತು ನಾಳೆ ಬೆಳಗ್ಗೆ ವಿಜಯಪುರದಲ್ಲಿ ಯಶವಂತರಾಯಗೌಡ ಪಾಟೀಲ್ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎನ್ನುವ ಮಾಹಿತಿ ಹೊರಬಿದ್ದಿದೆ.
ರಾಜೀನಾಮೆ ಸ್ವೀಕರಿಸುತ್ತೇನೆ
ಈ ಹಿಂದೆ ನಾನು, ಪರಮೇಶ್ವರ್ ಮಂತ್ರಿ ಸ್ಥಾನ ಸಿಗದಿ ದ್ದಾಗ ತಾಳ್ಮೆಯಿಂದ ಇರಲಿಲ್ಲವೇ? ರಾಜ ಕೀಯ ಭವಿಷ್ಯ ಬೇಕು ಎಂದರೆ ಪಕ್ಷ ಮುಖ್ಯ ಎಂದು
ಸಿಎಂ ಡಿ.ಕೆ. ಶಿವಕುಮಾರ್ ಕೊಟ್ಟ ಹೇಳಿಕೆಯು ಮತ್ತಷ್ಟು ಬಿಕ್ಕಟ್ಟಿಗೆ ಕಾರಣವಾಗಿತ್ತು.
ಟಿ.ನರಸೀಪುರದಲ್ಲಿ ಡಾ. ಎಚ್.ಸಿ. ಮಹದೇವಪ್ಪ ಪರವಾಗಿ ಸಾಮೂಹಿಕ ರಾಜೀನಾಮೆ ಘೋಷಿಸಿದ ಕೈ ಮುಖಂಡರು
ಶಾಸಕ ಎನ್.ವೈ. ಗೋಪಾಲಕೃಷ್ಣ ಬೆಂಬಲಿಗರ ಆಕ್ರೋಶ, ಎಚ್.ಕೆ. ಪಾಟೀಲಗೆ ಸಚಿವ ಸ್ಥಾನ ಸಿಗದ ಕಾರಣ ಗದಗ-ಬೆಟಗೇರಿ ನಗರಸಭಾ ಕಾಂಗ್ರೆಸ್ ಸದಸ್ಯರ ರಾಜೀನಾಮೆ. ರಾಘವೇಂದ್ರ ಹಿಟ್ನಾಳ್ ಬೆಂಬಲಿಸಿ ಕೊಪ್ಪಳ ಬ್ಲಾಕ್ ಪದಾಧಿಕಾರಿಗಳ ರಾಜೀನಾಮೆ ಕೊಟ್ಟರು,