Senior Actresses M N Lakshmidevi  
ರಾಜ್ಯ

ಎಂ.ಎನ್. ಲಕ್ಷ್ಮೀದೇವಿಗೆ ಸಾ.ರಾ. ಗೋವಿಂದು ಪ್ರಶಸ್ತಿ

ಬೆಂಗಳೂರು: ಸಾ.ರಾ. ಗೋವಿಂದು ಕನ್ನಡ ಪ್ರತಿಷ್ಠಾನ ನೀಡುವ 2026ನೇ ಸಾಲಿನ ‘ಸಾ.ರಾ. ಗೋವಿಂದು ಕನ್ನಡಶ್ರೀ ಪ್ರಶಸ್ತಿ’ಗೆ ಹಿರಿಯ ಕಲಾವಿದೆ ಎಂ.ಎನ್. ಲಕ್ಷ್ಮೀದೇವಿ ಅವರು ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು 25 ಸಾವಿರ ರೂ. ನಗದು, ಲಕ ಒಳಗೊಂಡಿದೆ. ಎಂ.ಎನ್. ಲಕ್ಷ್ಮೀದೇವಿ ಕಳೆದ ಏಳು ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಪಾತ್ರಗಳಲ್ಲಿ 1 ಸಾವಿರಕ್ಕೂ ಅಧಿಕ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರರಂಗದಲ್ಲಿನ ಅವರ ಸುಧೀರ್ಘ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಜು. 13ರಂದು ಸಂಜೆ 5 ಗಂಟೆಗೆ ನಗರದ ಗಾಂಧಿಭವನದ ಮಹಾದೇವ ದೇಸಾಯಿ ಸಭಾಂಗಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸಾಹಿತಿ ಡಾ. ಬರಗೂರು ರಾಮಚಂದ್ರಪ್ಪ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಶಿಕ್ಷಣ ತಜ್ಞ ಡಾ. ವೂಡೇ ಪಿ. ಕೃಷ್ಣ ಅಧ್ಯಕ್ಷತೆ ವಹಿಸಲಿದ್ದು, ಸಂಗೀತ ನಿರ್ದೇಶಕ ಡಾ. ಹಂಸಲೇಖ ಇತರರು ಭಾಗವಹಿಸಲಿದ್ದಾರೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಸಿ.ಕೆ. ರಾಮೇಗೌಡ ತಿಳಿಸಿದ್ದಾರೆ.