- ವಂದೇ ಭಾರತ್ ಸ್ಲೀಪರ್ ರೈಲು
ಕಲಬುರಗಿ: ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಶುಭಾರಂಭಗೊಳ್ಳುತ್ತಿದ್ದು ಮುಂಬೈ-ಬೆಂಗಳೂರು ಮಧ್ಯೆ ಈ ರೈಲು ಕಲ್ಯಾಣ ಕರ್ನಾಟಕದ ಕಲಬುರಗಿ ಮೂಲಕ ಸಂಚರಿಸುವ ಕೊಡುಗೆ ನೀಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರಕ್ಕೆ ಮಾಜಿ ಸಂಸದ ಡಾ.ಉಮೇಶ ಜಾಧವ್ ಅಭಿನಂದನೆ ಸಲ್ಲಿಸಿದ್ದಾರೆ.
ಮುಂಬೈ&ಬೆಂಗಳೂರು ವಂದೇ ಭಾರತ್ ಸ್ಲೀಪರ್ ರೈಲು ಕಲ್ಯಾಣ ಕರ್ನಾಟಕದ ಜಿಲ್ಲೆಗಳನ್ನು ಸಂಪರ್ಕಿಸುತ್ತಿರುವುದರಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರವು ಈ ಭಾಗದ ಪ್ರಯಾಣಿಕರಿಗೆ ನೀಡಿದ ಕೊಡುಗೆಯಿಂದ ಇಲ್ಲಿನ ಜನ ಸಂತಸ ಪಟ್ಟಿದ್ದಾರೆ.
ಕಳೆದ ಎರಡು ವರ್ಷಗಳಲ್ಲಿ ಕಲಬುರಗಿ ಬೆಂಗಳೂರು ಮಧ್ಯೆ ಸಂಚರಿಸುವ ವಂದೇ ಭಾರತ್ ಪ್ರಯಾಣಿಕರ ದಟ್ಟಣೆಯಿಂದ ಲಾಭದಾಯಕವಾಗಿ ನಡೆಯುತ್ತಿದ್ದು ವಂದೇ ಭಾರತ್ ಸ್ಲೀಪರ್ ರೈಲುಗಾಡಿಗೆ ಪ್ರಯಾಣಿಕರು ಉತ್ತಮ ಸ್ಪಂದನ ನೀಡಬೇಕು. ಶ್ರೀದಲ್ಲಿ ಕಲಬುರಗಿ ವಿಮಾನ ನಿಲ್ದಾಣದಿಂದ ಪ್ರಮುಖ ನಗರಗಳಿಗೆ ವಿಮಾನ ಸಂಚಾರ ಪ್ರಾರಂಭವಾಗುವ ಸೂಚನೆ ಬಂದಿದ್ದು, ಕೇಂದ್ರ ಸರ್ಕಾರ ಅತ್ಯಂತ ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಕೇಂದ್ರ ಸರ್ಕಾರದ ಈ ಘೋಷಣೆಯಿಂದ ಮತ್ತಷ್ಟು ಪ್ರಗತಿಗೆ ಪೂರಕವಾಗಲಿದೆ ಎಂದು ಡಾ. ಜಾಧವ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.