ಬಸವಕಲ್ಯಾಣ ತಾಲೂಕಿನ ತಡೋಳಾ ಶ್ರೀಮಠದಲ್ಲಿ ಜಿಲ್ಲಾ ಮಠಾಧೀಶರ ಒಕ್ಕೂಟದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀ ರಾಜೇಶ್ವರ ಶಿವಾಚಾರ್ಯರನ್ನು ಸನ್ಮಾನಿಸಲಾಯಿತು. ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು, ಶ್ರೀ ನಲಿಂಗ ರುದ್ರಮುನಿ ಶಿವಾಚಾರ್ಯರು, ಶ್ರೀ ಶಿವಾನಂದ ಸ್ವಾಮೀಜಿ, ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ ಇತರರಿದ್ದರು. 
ರಾಜ್ಯ

ಮಠಗಳು ಸಾಮರಸ್ಯ ಕಾಪಾಡುವ ಕೇಂದ್ರ

ಪ್ರಮುಖ ಮುಖ್ಯಾಂಶಗಳು

  • ಶ್ರೀ ರಾಜೇಶ್ವರ ಶಿವಾಚಾರ್ಯ ಅಭಿಮತ
  • ತಂಡೋಳಾದಲ್ಲಿ ಮಠಾಧೀಶರ ಸಭೆ
ಬಸವಕಲ್ಯಾಣ: ಮಠಗಳು ಸಮಾಜದಲ್ಲಿ ಸಾಮರಸ್ಯ ಕಾಪಾಡುವ ಕೇಂದ್ರಗಳಾಗಿವೆ ಎಂದು ಬೀದರ್​ ಜಿಲ್ಲಾ ಮಠಾಧೀಶರ ಒಕ್ಕೂಟದ ನೂತನ ಅಧ್ಯಕ್ಷರಾದ ತಡೋಳಾ&ಮೇಹಕರ್​ನ ಶ್ರೀ ರಾಜೇಶ್ವರ ಶಿವಾಚಾರ್ಯರು ಹೇಳಿದರು.
ತಡೋಳಾ ಆಶ್ರಮದಲ್ಲಿ ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಸಾನ್ನಿಧ್ಯದಲ್ಲಿ ಮಂಗಳವಾರ ನಡೆದ ಮಠಾಧೀಶರ ಸಭೆಯಲ್ಲಿ ಜಿಲ್ಲಾ ಮಠಾಧೀಶರ ಒಕ್ಕೂಟದ ಪದಾಧಿಕಾರಿಗಳ ಆಯ್ಕೆ ನಂತರ ಮಾತನಾಡಿದ ಅವರು, ಸಮಾಜದಲ್ಲಿ ಸಂಸತಿ ಹಾಗೂ ಸಂಸ್ಕಾರ ಉಳಿಸಿ ಬೆಳೆಸುವುದೇ ಒಕ್ಕೂಟದ ಮೂಲ ಆಶಯವಾಗಿದೆ. ಪರಸ್ಪರ ಭಿನ್ನಾಭಿಪ್ರಾಯ ಮತ್ತು ಆತಂರಿಕ ಸಮಸ್ಯೆಯನ್ನು ಬಗೆಹರಿಸುವ ಜತೆಗೆ ಭಕ್ತರ ಸಮಸ್ಯೆಗಳಿಗೆ ಸ್ಪಂದಿಸಿ ಸೂಕ್ತ ಮಾರ್ಗದರ್ಶನ ನೀಡುವುದು ಒಕ್ಕೂಟದ ಉದ್ದೇಶವಾಗಿದೆ ಎಂದರು.
ಹಿರನಾಗಾಂವದ ಶ್ರೀ ಜಯಶಾಂತ ಲಿಂಗ ಮಹಾಸ್ವಾಮೀಜಿ, ಚಿಟಗುಪ್ಪಾದ ಶ್ರೀ ಗುರುಲಿಂಗ ಶಿವಾಚಾರ್ಯರು, ಹುಡಗಿಯ ಶ್ರೀ ವೀರೂಪಾಕ್ಷ ಶಿವಾಚಾರ್ಯರು, ರಾಜೇಶ್ವರದ ಶ್ರೀ ನಲಿಂಗ ರುದ್ರಮುನಿ ಶಿವಾಚಾರ್ಯರು, ಕಿಟ್ಟಾದ ಶ್ರೀ ಸಿದ್ಧೇಶ್ವರ ಶಿವಾಚಾರ್ಯರು, ಗಡಿಗೌಂಡಗಾಂವದ ಶ್ರೀ ಶಾಂತವೀರ ಶಿವಾಚಾರ್ಯರು, ಹಳ್ಳೀಖೇಡದ ಶ್ರೀ ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯರು, ಕಲ್ಲೂರಿನ ಶ್ರೀ ಮೃತ್ಯುಂಜಯ ಶಿವಾಚಾರ್ಯರು, ಬಿಮಳಖೇಡನ ಶೀ ಚಂದ್ರಶೇಖರ ಶಿವಾಚಾರ್ಯರು, ಸಂಸ್ಥಾನ ಗವಿಮಠದ ಶ್ರೀ ಡಾ.ಅಭಿನವ ನಲಿಂಗ ರುದ್ರಮುನಿ ಶಿವಾಚಾರ್ಯರು, ಶಿವಣಿ&ಹಲರ್ಬಗಾದ ಶ್ರೀ ಹಾವಗಿಲಿಂಗ ಶಿವಾಚಾರ್ಯರು, ಮಂಠಾಳದ ಶ್ರೀ ಅಭಿನವ ಚನ್ನಬಸವ ಮಹಾಸ್ವಾಮೀಜಿ, ಸ್ವಂತ&ನಾರನಾಳದ ಶ್ರೀ ಶಿವಕುಮಾರ ಶಿವಾಚಾರ್ಯರು, ಸದಲಾಪುರದ ಶ್ರೀ ಸಿದ್ಧಲಿಂಗ ಶಿವಾಚಾರ್ಯರು, ಚಾಂಬೋಳದ ಶ್ರೀ ಅಭಿನವ ರುದ್ರಮುನಿ ಶಿವಾಚಾರ್ಯರು, ಖೇಳಗಿಯ ಶ್ರೀ ಶಿವಲಿಂಗ ಮಹಾಸ್ವಾಮೀಜಿ, ಹುಡಗಿಯ ಶ್ರೀ ಚನ್ನಮಲ್ಲ ಮಹಾಸ್ವಾಮೀಜಿ, ಕಮಠಾಣದ ಶ್ರೀ ರಾಚೋಟೇಶ್ವ ಶಿವಾಚಾರ್ಯರು, ಡೋಣಗಾಂವದ ಶ್ರೀ ಡಾ.ಶಂಭುಲಿಂಗ ಶಿವಾಚಾರ್ಯರು, ಸಿಂಧನಕೇರಾದ ಶ್ರೀ ಹೊನ್ನಲಿಂಗ ಮಹಾಸ್ವಾಮೀಜಿ, ಖಟಕಚಿಂಚೋಳಿಯ ಶ್ರೀ ಬಸವಲಿಂಗ ಮಹಾಸ್ವಾಮೀಜಿ, ಸಾಯಗಾಂವದ ಶ್ರೀ ಶಿವಾನಂದ ಮಹಾಸ್ವಾಮೀಜಿ, ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ ಇತರರಿದ್ದರು.
ಮಠಾಧೀಶರ ಒಕ್ಕೂಟಕ್ಕೆ ಆಯ್ಕೆ
ಬೀದರ್​ ಜಿಲ್ಲೆಯ ಮಠಾಧೀಶರ ಒಕ್ಕೂಟದ ನೂತನ ಅಧ್ಯಕ್ಷರಾಗಿ ಮೇಹಕರ, ತಡೋಳಾದ ಶ್ರೀ ರಾಜೇಶ್ವರ ಶಿವಾಚಾರ್ಯರು, ಉಪಾಧ್ಯಕ್ಷರಾಗಿ ರಾಜೇಶ್ವರದ ಶ್ರೀ ನಲಿಂಗ ರುದ್ರಮುನಿ ಶಿವಾಚಾರ್ಯರು, ಶಿವಣಿ& ಹಲರ್ಬಗಾದ ಶ್ರೀಹಾವಗಿಲಿಂಗ ಶಿವಾಚಾರ್ಯರು, ಕಾರ್ಯದರ್ಶಿಗಳಾಗಿ ಹುಡಗಿಯ ಶ್ರೀ ಚೆನ್ನಮಲ್ಲ ಮಹಾಸ್ವಾಮೀಜಿ, ಸಹಕಾರ್ಯದರ್ಶಿಗಳಾಗಿ ಚಾಂಬೋಳ ಶ್ರೀ ಅಭಿನವ ರುದ್ರಮುನಿ ಶಿವಾಚಾರ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.