ದಕ್ಷಿಣ ಕರ್ನಾಟಕದಲ್ಲಿ ಮಾನ್ಸೂನ್ ಸಕ್ರಿಯ 
ರಾಜ್ಯ

ದಕ್ಷಿಣ ಕರ್ನಾಟಕದಲ್ಲಿ ಮುಂಗಾರು ಸಕ್ರಿಯ: ಮುಂದಿನ 3 ದಿನ ಬಿರುಸು ಮಳೆ- Monsoon active in South Karnataka

ಬೆಂಗಳೂರು: Monsoon active-ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ,ಅರಬ್ಬಿ ಸಮುದ್ರದಲ್ಲಿ ತೇವಾಂಶ ಭರಿತ ಮೋಡಗಳಿರುವ ಕಾರಣ ದಕ್ಷಿಣ ಕರ್ನಾಟಕದಲ್ಲಿ ನಿಷ್ಕ್ರಿಯವಾಗಿದ್ದ ಮಾನ್ಸೂನ್ ಸಕ್ರಿಯವಾಗಿದೆ.
ಮಂಡ್ಯ,ಮೈಸೂರುಸೇರಿ ದಕ್ಷಿಣ ಕರ್ನಾಟಕದ ಕೆಲ ಭಾಗಗಳಲ್ಲಿ ಬುಧವಾರ ವರ್ಷಧಾರೆಯಾಯಿತು. ಇದರಿಂದ ಹಲವು ದಿನಗಳಿಂದ ಮಳೆಗಾಗಿ ಪರಿತಪಿಸುತ್ತಿದ್ದ ರೈತರ ಮುಖದಲ್ಲಿ ಮಂದಹಾಸ ಬೀರಿದೆ. ನೀರು ಇಲ್ಲದೆ ಒಣಗುತ್ತಿದ್ದ ಬೆಳೆಗಳಿಗೂ ಮರು ಜೀವ ಸಿಕ್ಕಿದೆ.
ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಬೆಂ.ದಕ್ಷಿಣ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೋಲಾರ, ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆ ಸೇರಿ ದಕ್ಷಿಣ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆಯಾಗಲಿದೆ. ಈ ವೇಳೆ ಕೆಲ ಜಿಲ್ಲೆಗಳಲ್ಲಿ ಗುಡುಗು ಮತ್ತು ಬಿರುಗಾಳಿ ಜಾಸ್ತಿ ಇರುವುದರಿಂದ ಹವಾಮಾನ ಇಲಾಖೆ, ಯೆಲ್ಲೋ ಅಲರ್ಟ್ ಕೊಟ್ಟಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯನಗರ, ಬಳ್ಳಾರಿ ಮತ್ತು ಯಾದಗಿರಿ ಸೇರಿ ಉತ್ತರ ಕರ್ನಾಟಕದ ಭಾಗದಲ್ಲಿ ಮುಂದಿನ 3 ದಿನ ಸಾಧಾರಣ ಮಳೆ ಇರಲಿದೆ.
ರಾಜ್ಯದಲ್ಲಿ ಬಿಸಿಲು ಹೆಚ್ಚಾಗುತ್ತಿದ್ದಂತೆ ಮಳೆ ಸುರಿಯುತ್ತಿದೆ. ಪ್ರಸ್ತುತ ದಕ್ಷಿಣ ಕರ್ನಾಟಕದಲ್ಲಿ ಮಾನ್ಸೂನ್ ಸಕ್ರಿಯವಾಗಿದೆ.ಕೆಲವೆಡೆ ಮಳೆ ಜತೆಗೆ ಗುಡುಗು,ಬಿರುಗಾಳಿ ಜಾಸ್ತಿಇರಲಿದೆ. ಸೆ.22ರಿಂದ ಉತ್ತರ ಕರ್ನಾಟಕ ಸೇರಿ ಸೇರಿ ರಾಜ್ಯಾದ್ಯಂತ ಮುಂಗಾರು ಸಕ್ರಿಯವಾಗಲಿದ್ದು, ಅಲ್ಲಿನ ಭಾಗಗಳಲ್ಲೂ ಉತ್ತಮ ಮಳೆ ಸುರಿಯುವ ಸಾಧ್ಯತೆ ಇದೆ.
ಡಾ.ಶ್ರೀನಿವಾಸರೆಡ್ಡಿ, ಹಿರಿಯ ಹವಾಮಾನ ತಜ್ಞ.