ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ 
ರಾಜ್ಯ

ಬಿಡದಿ ರೈತರ ಪರ ನನ್ನ ಹೋರಾಟ ಶುರು

ಬೆಂಗಳೂರು: ಟೌನ್‌ಶಿಪ್ ಹೆಸರಿನಲ್ಲಿ ಬಿಡದಿ ಸುತ್ತಮುತ್ತಲ ರೈತರ ಲವತ್ತಾದ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ. ಇದರ ವಿರುದ್ಧ ಹೋರಾಟ ಶುರುವಾಗಲಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದಾರೆ.
ಮೇ 18ಕ್ಕೆ ನನ್ನ 93ನೇ ಹುಟ್ಟುಹಬ್ಬ ಇದೆ. ‘ದೇವೇಗೌಡರು ಈ ಹಿಂದೆ ಸಭೆಯಲ್ಲಿ ಅಳುತ್ತಿದ್ದರು’ ಎಂದು ಕೆಲವರು ವ್ಯಂಗ್ಯ ಮಾಡುತ್ತಿದ್ದರು. ಆದರೆ ಪ್ರಸ್ತುತ ವ್ಯವಸ್ಥೆಯನ್ನು ನೋಡಿ ನಾನು ನಗುತ್ತಿದ್ದೇನೆ. ಈಗಿನ ಸಿಎಂ ಸಿದ್ದರಾಮಯ್ಯ ನನ್ನ ಸ್ನೇಹಿತ ಮತ್ತು ಹಳೆಯ ಸಹೋದ್ಯೋಗಿ. ಆದರೆ ಇಲ್ಲಿ ನಡೆಯುತ್ತಿರುವುದು ಯಾರಿಗೂ ಕಾಣದಿರುವುದು ನನಗೆ ಅತೀವ ನೋವು ತಂದಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೆಸರು ಹೇಳದೆ ಸುದ್ದಿಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದರು.\
ಬೆಳಗ್ಗೆ ಪೇಪರ್ ಓದುವಾಗ ನೋಡಿದೆ, ‘ಕುಮಾರಸ್ವಾಮಿಗೆ ಮಾಡುವುದಕ್ಕೆ ಬೇರೆ ಕೆಲಸ ಇಲ್ಲ’ ಎಂದು ಒಬ್ಬ ವ್ಯಕ್ತಿ ಹೇಳಿದ್ದಾರೆ. ‘ಕುಮಾರಸ್ವಾಮಿ ಮಾಡಿದ ಬಿಡದಿ ಟೌನ್‌ಶಿಪ್ ಅನ್ನು ನಾನು ಮಾಡುತ್ತಿದ್ದೇನೆ’ ಎಂದಿದ್ದಾರೆ. ಆಗ ಕುಮಾರಸ್ವಾಮಿ ಮಾಡಲು ಹೊರಟಿದ್ದು ಏನು, ಈ ವ್ಯಕ್ತಿ ಈಗ ಮಾಡುತ್ತಿರುವ ದಂಧೆ ಏನು ಎಂಬುದು ಜನರಿಗೆ ಅರ್ಥವಾಗಿದೆ. ಅದರ ವಿರುದ್ಧ ಹೋರಾಟ ಮಾಡುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.