ಮಂಡ್ಯ: ನಾಗಮಂಗಲ ಕ್ಷೇತ್ರದ ಮಾಜಿ ಶಾಸಕ ಸುರೇಶ್‌ಗೌಡ ಪ್ರಯಾಣಿಸುತ್ತಿದ್ದ ಕಾರು ಬಸರಾಳು ಗ್ರಾಮದ ಸಮೀಪ ಭೀಕರ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಸುರೇಶ್‌ಗೌಡ ಪ್ರಾಣಾಪಾಯದಿಂದ ಪಾರಾಗಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೈಸೂರಿನಲ್ಲಿ ಆಯೋಜಿಸಲಾಗಿದ್ದ ಮದುವೆ ಸಮಾರಂಭವೊಂದನ್ನು ಮುಗಿಸಿಕೊಂಡು ವಾಪಸ್ ಆಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಜಖಂಗೊಂಡಿದೆ. ಸುರೇಶ್‌ಗೌಡ ಅವರ ಕೈ ಬೆರಳುಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಕಾರಿನಲ್ಲಿದ್ದ ಚಾಲಕ ಶೇಖರ್, ಬಿಂಡಿನಹಳ್ಳಿ ಪ್ರಸನ್ನ, ಗನ್ಮ್ಯಾನ್ಗೂ ಸಹ ಗಂಭೀರ ಗಾಯಗಳಾಗಿವೆ.
ಸದ್ಯ ಮಾಜಿ ಶಾಸಕ ಸುರೇಶ್ಗೌಡರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಘಟನೆಗೆ ಸಂಬಂಧಪಟ್ಟಂತೆ ಬಸರಾಳು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.