ಬೆಳಗಾವಿ: ತಂಬಾಕು ಸೇವನೆ ದೇಹ ಮತ್ತು ಮನಸ್ಸಿಗೆ ಅಪಾಯಕಾರಿಯಾಗಿದೆ ಎಂದು ಕೆಎಲ್ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆಯ ವೈದ್ಯಕಿಯ ಅಧೀಕ್ಷಕ ಡಾ.ಸಂಜಯ ಕಂಬಾರ ಹೇಳಿದರು. ನಗರದ ಕೆಎಲ್ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆ, ಕೆಎಲ್ಇ ಸೆಂಟಿನರಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸ್ ಸಹಯೋಗದಲ್ಲಿ ಬುಧವಾರ ವಿಶ್ವ ತಂಬಾಕುರಹಿತ ದಿನದ ಪ್ರಯುಕ್ತ ಹಮ್ಮಿಕೊಂಡಿದ್ದ ಜಾಗೃತಿ ರ್ಯಾಲಿ ಉದ್ಘಾಟಿಸಿ ಅವರು ಮಾತನಾಡಿದರು. ತಂಬಾಕು ಸೇವನೆ ವಿಶ್ವದಾದ್ಯಂತ ಲಾಂತರ ಜನರ ಆರೋಗ್ಯ ಹಾಳುಮಾಡುತ್ತಿರುವ ಗಂಭೀರ ಆರೋಗ್ಯ ಸಮಸ್ಯೆಯಾಗಿದೆ. ಧೂಮಪಾನ, ಗುಟ್ಕಾ, ಪಾನ್ ಮಸಾಲಾ ಹಾಗೂ ಇತರ ತಂಬಾಕು ಉತ್ಪನ್ನಗಳ ಬಳಕೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಕಾಯಿಲೆಗಳು ಸೇರಿದಂತೆ ಅನೇಕ ಜೀವಘಾತಕ ರೋಗಗಳು ಉಂಟಾಗುತ್ತವೆ ಎಂದರು. ಕೆಎಲ್ಇ ಸೆಂಟಿನರಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸ್ ಕಾಲೇಜಿನ ಪ್ರಾಂಶುಪಾಲ ಡಾ.ವಿಕ್ರಾಂತ ನೇಸರಿ ಮಾತನಾಡಿ, ಆರೋಗ್ಯಯುತ ಸಮಾಜ ನಿರ್ಮಾಣದಲ್ಲಿ ಎಲ್ಲರ ಪಾತ್ರ ಅಗತ್ಯವಾಗಿದೆ ಎಂದರು. ಆಸ್ಪತ್ರೆ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ನವೀನ ಎನ್. ಮಾತನಾಡಿ, ಆರೋಗ್ಯಕರ ಸಮಾಜ ನಿರ್ಮಾಣಕ್ಕಾಗಿ ಯುವಜನರು ತಂಬಾಕು ಹಾಗೂ ಇತರ ವ್ಯಸನಕಾರಿ ಪದಾರ್ಥಗಳಿಂದ ದೂರವಿರಬೇಕು ಎಂದರು. ರಾಜು ಭಾತಖಂಡೆ, ಗಿರೀಶ ದೊಂಗಡಿ ಇತರರಿದ್ದರು.
ಬೆಳಗಾವಿ: ತಂಬಾಕು ಸೇವನೆ ದೇಹ ಮತ್ತು ಮನಸ್ಸಿಗೆ ಅಪಾಯಕಾರಿಯಾಗಿದೆ ಎಂದು ಕೆಎಲ್ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆಯ ವೈದ್ಯಕಿಯ ಅಧೀಕ್ಷಕ ಡಾ.ಸಂಜಯ
ನಗರದ ಕೆಎಲ್ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆ, ಕೆಎಲ್ಇ ಸೆಂಟಿನರಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸ್ ಸಹಯೋಗದಲ್ಲಿ ಬುಧವಾರ ವಿಶ್ವ ತಂಬಾಕುರಹಿತ ದಿನದ ಪ್ರಯುಕ್ತ ಹಮ್ಮಿಕೊಂಡಿದ್ದ ಜಾಗೃತಿ ರ್ಯಾಲಿ ಉದ್ಘಾಟಿಸಿ ಅವರು ಮಾತನಾಡಿದರು.
ತಂಬಾಕು ಸೇವನೆ ವಿಶ್ವದಾದ್ಯಂತ ಲಾಂತರ ಜನರ ಆರೋಗ್ಯ ಹಾಳುಮಾಡುತ್ತಿರುವ ಗಂಭೀರ ಆರೋಗ್ಯ ಸಮಸ್ಯೆಯಾಗಿದೆ. ಧೂಮಪಾನ, ಗುಟ್ಕಾ, ಪಾನ್ ಮಸಾಲಾ ಹಾಗೂ ಇತರ ತಂಬಾಕು ಉತ್ಪನ್ನಗಳ ಬಳಕೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಕಾಯಿಲೆಗಳು ಸೇರಿದಂತೆ ಅನೇಕ ಜೀವಘಾತಕ ರೋಗಗಳು ಉಂಟಾಗುತ್ತವೆ ಎಂದರು.
ಕೆಎಲ್ಇ ಸೆಂಟಿನರಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸ್ ಕಾಲೇಜಿನ ಪ್ರಾಂಶುಪಾಲ ಡಾ.ವಿಕ್ರಾಂತ ನೇಸರಿ ಮಾತನಾಡಿ, ಆರೋಗ್ಯಯುತ ಸಮಾಜ ನಿರ್ಮಾಣದಲ್ಲಿ ಎಲ್ಲರ ಪಾತ್ರ ಅಗತ್ಯವಾಗಿದೆ ಎಂದರು.
ಆಸ್ಪತ್ರೆ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ನವೀನ ಎನ್. ಮಾತನಾಡಿ, ಆರೋಗ್ಯಕರ ಸಮಾಜ ನಿರ್ಮಾಣಕ್ಕಾಗಿ ಯುವಜನರು ತಂಬಾಕು ಹಾಗೂ ಇತರ ವ್ಯಸನಕಾರಿ ಪದಾರ್ಥಗಳಿಂದ ದೂರವಿರಬೇಕು ಎಂದರು.
ರಾಜು ಭಾತಖಂಡೆ, ಗಿರೀಶ ದೊಂಗಡಿ ಇತರರಿದ್ದರು.