- * ಪ್ರಶಸ್ತಿಯು 25 ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಫಲಕವನ್ನು ಹೊಂದಿದೆ.
- * ಆ.1ರಂದು ಮುಂಬೈನ ಅಂಧೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ
ಬೆಂಗಳೂರು: ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘ ನೀಡುವ ‘ರಾಷ್ಟ್ರೀಯ ಮಾಧ್ಯಮ ಪ್ರಶಸ್ತಿ’ಗೆ ಹಿರಿಯ ಪತ್ರಕರ್ತ ಜಿ.ಎನ್. ಮೋಹನ್ ಭಾಜನರಾಗಿದ್ದಾರೆ. ಪ್ರಶಸ್ತಿಯು 25 ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಫಲಕವನ್ನು ಹೊಂದಿದೆ. ಹಿರಿಯ ಪತ್ರಕರ್ತ ಕೆ.ಟಿ. ವೇಣುಗೋಪಾಲ್ ಹೆಸರಿನಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಡಾ. ಸುನೀತಾ ಎಂ. ಶೆಟ್ಟಿ ನೇತೃತ್ವದ ಆಯ್ಕೆ ಸಮಿತಿಯು ಈ ಆಯ್ಕೆ ಮಾಡಿದೆ. ಆ.1ರಂದು ಮುಂಬೈನ ಅಂಧೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಸವಿತಾ ಸುರೇಶ್ ಶೆಟ್ಟಿ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮಹಾರಾಷ್ಟ್ರ ಘಟಕದ ಅಧ್ಯಕ್ಷ ಡಾ. ಶಿವ ಮೂಡಿಗೆರೆ ತಿಳಿಸಿದ್ದಾರೆ.