Newlywed dies in accident
ಚಿಕ್ಕಬಳ್ಳಾಪುರ: ಶೆಟ್ಟಿಗೆರೆ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಟೇನರ್ಗೆ ಕಾರು ಡಿಕ್ಕಿಯಾಗಿ ಮಹಿಳೆ ಸೇರಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಆಂಧ್ರದ ಅನಂತಪುರದ ಅವಳಗಿ ರತಾ ರೆಡ್ಡಿ (27), ಪವನ್ ರೆಡ್ಡಿ (30) ಮೃತರು.
ಗುರುವಾರ ಮುಂಜಾನೆ ಬೆಂಗಳೂರು, ಹೈದರಾಬಾದ್ಗೆ ಸಂಪರ್ಕ ಕಲ್ಪಿಸುವ ಇಲ್ಲಿನ ಹೆದ್ದಾರಿ 44ರ ಬೈಪಾಸ್ ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು ವಾಹನಗಳು ನುಜ್ಜುಗುಜ್ಜಾಗಿದೆ. ಆದರೆ, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಹೆದ್ದಾರಿಯಲ್ಲಿ ಅತಿ ವೇಗವಾಗಿ ಸಂಚರಿಸುತ್ತಿದ್ದ ಕಾರು ದಿಢೀರನೇ ಬ್ರೇಕ್ ಹಾಕಿ ನಿಲುಗಡೆಯಾದ ಹಿನ್ನೆಲೆಯಲ್ಲಿ ನಿಯಂತ್ರಣ ಕಳೆದುಕೊಂಡು 2 ಕಾರು, 2 ಲಾರಿ, 1 ಟ್ಯಾಂಕರ್ ಲಾರಿಯು ಡಿಕ್ಕಿ ಹೊಡೆದಿದೆ. ಇದರ ರಭಸದಲ್ಲಿ ಸಿಮೆಂಟ್ ಲಾರಿಯು ರಸ್ತೆಯ ಬದಿಗೆ ಉರುಳಿ ಬಿದ್ದಿದೆ. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಾಫ್ಟ್ವೇರ್ ಇಂಜಿನಿಯರ್ಗಳಾಗಿದ್ದ ರತಾ ರೆಡ್ಡಿ, ರಾಜಶೇಖರ್ ರೆಡ್ಡಿ 5 ತಿಂಗಳ ಹಿಂದೆ ಮದುವೆಯಾಗಿದ್ದರು. ಗುರುವಾರ ಬೆಂಗಳೂರಿನಿಂದ ಆಂಧ್ರದ ಅವಳಗಿಗೆ ಕಾರಿನಲ್ಲಿ ತೆರಳುತ್ತಿದ್ದರು. ಇದರ ನಡುವೆ ಶೆಟ್ಟಿಗೆರೆ ಕ್ರಾಸ್ ಸಮೀಪದ ಹೆದ್ದಾರಿಯಲ್ಲಿ ನಿಂತಿದ್ದ ಕಂಟೇನರ್ಗೆ ಕಾರು ಡಿಕ್ಕಿ ಹೊಡೆದಿದೆ. ಪೆರೇಸಂದ್ರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.